ಕರ್ನಾಟಕ

ನಮ್ಮಿಬ್ಬರ ನಡುವೆ ಅನೈತಿಕ ಸಂಬಂಧವಿಲ್ಲ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಜೋಡಿ!

Pinterest LinkedIn Tumblr


ಹುಬ್ಬಳ್ಳಿ: ಇಬ್ಬರ ನಡುವೆ ಅನೈತಿಕ ಸಂಬಂಧ ಇದೆ ಎಂದು ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ ಹಿನ್ನೆಲೆ ಮನನೊಂದ ಯುವಕ, ಯುವತಿ ಬಾವಿಗೆ ಹಾರಿ ಪ್ರಾಣ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆ ಕುಂದಗೋಳ ತಾಲೂಕಿನ ಗುರುವಿನ ಹಳ್ಳಿಯಲ್ಲಿ ನಡೆದಿದೆ.

ರವಿ ಇಂಗಳಹಳ್ಳಿ (22) ಮತ್ತು ಮೇಘಾ ಪಾಟೀಲ್ (22) ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡವರು. ಕೆಲ ದಿನಗಳ ಹಿಂದೆ ಇಬ್ಬರ ನಡುವೆ ಮಧ್ಯ ಅನೈತಿಕ ಸಂಬಂಧ ಇದೆ ಮನೆಯವರು ಶಂಕೆ ವ್ಯಕ್ತಪಡಿಸಿದ್ದರು. ಇದರಿಂದ ಮನನೊಂದ ಇಬ್ಬರು ಒಬ್ಬರಿಗೊಬ್ಬರು ತಬ್ಬಿ ವೇಲ್ ಕಟ್ಟಿಕೊಂಡು ಬಾವಿಗೆ ಹಾರಿ ಪ್ರಾಣಬಿಟ್ಟಿದ್ದಾರೆ.

ಕಳೆದ ಮೂರು ದಿನಗಳ ಹಿಂದೆಯೇ ಇಬ್ಬರು ನಾಪತ್ತೆಯಾಗಿದ್ದರು, ಈ ವೇಳೆ ಹುಟುಕಾಟ ನಡೆಸಿದ್ದ ಕುಟುಂಬಸ್ಥರಿಗೆ ಯಾವುದೇ ಮಾಹಿತಿ ಲಭಿಸಿರಲಿಲ್ಲ. ಆದರೆ ಇಂದು ಬೆಳಗ್ಗೆ ಊರಿನ ಗ್ರಾಮಸ್ಥರು ಬಾವಿಯಲ್ಲಿ ಮೃತದೇಹಗಳು ತೇಲುತ್ತಿರುವುದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಅಂದಹಾಗೇ ಸಂಬಂಧದಲ್ಲಿ ಮೃತ ರವಿ ಸೋದರ ಮಾವನ ಹೆಂಡತಿ ಮೇಘಾ ಪಾಟೀಲ್ ಆಗಿದ್ದು, ನಮ್ಮ ಇಬ್ಬರ ಮಧ್ಯೆ ಅನೈತಿಕ ಸಂಬಂಧ ಇಲ್ಲ. ನಾಬಿಬ್ಬರು ಸಹೋದರ, ಸಹೋದರಿ ರೀತಿ ಇದ್ದೇವೆ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಇಬ್ಬರ ನಡುವೆ ಅನೈತಿಕ ಸಂಬಂಧ ಇರುವ ಕುರಿತು ಈಗಾಗಲೇ ಎರಡು ಬಾರಿ ಕುಟುಂಬಸ್ಥರು ರಾಜಿ ಪಂಚಾಯಿತಿ ನಡೆಸಿ ಎಚ್ಚರಿಕೆ ನೀಡಿದ್ದರು. ಇದಾದ ಬಳಿಕ ಇಬ್ಬರು ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಮಾಡಿದ್ದರು ಎನ್ನಲಾಗಿದೆ.

ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಇಬ್ಬರ ಮೃತದೇಹಗಳನ್ನು ಬಾವಿಯಿಂದ ಹೊರಕ್ಕೆ ತೆಗೆದು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ. ಘಟನೆ ಕುರಿತು ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Comments are closed.