ಕರ್ನಾಟಕ

ನೆಟ್ಟಿಗರ ಆಕ್ರೋಶಕ್ಕೆ ಕಾರಣವಾದ ಶೋಭಾ ಕರಂದ್ಲಾಜೆಯ ಕನ್ನಡ ರಾಜ್ಯೋತ್ಸವದ ಶುಭಾಶಯ !

Pinterest LinkedIn Tumblr

ಬೆಂಗಳೂರು: ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಅವರು ಕನ್ನಡ ರಾಜ್ಯೋತ್ಸವ ನಿಮ್ಮಿತ್ತ ನಾಡಿನ ಜನತೆಗೆ ಶುಭ ಕೋರಲು ಹೋಗಿ ಯಡವಟ್ಟು ಮಾಡಿಕೊಂಡಿದ್ದಾರೆ.

ರಾಜ್ಯಾದ್ಯಂತ ಇಂದು ಕರ್ನಾಟಕ ರಾಜ್ಯೋತ್ಸವ ಸಂಭ್ರಮಾಚರಣೆಯಲ್ಲಿ ಮುಳುಗಿದ್ದು, ಪ್ರಧಾನಿ ಮೋದಿ, ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ರಾಜ್ಯ ರಾಷ್ಟ್ರ ನಾಯಕರು ಕರ್ನಾಟಕದ ಜನತೆಗೆ ಶುಭ ಕೋರುತ್ತಿದ್ದಾರೆ. ಅಂತಯೇ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಅವರೂ ಕೂಡ ಶೋಭಾ ಕೋರಿದ್ದು, ಅವರ ಶುಭಾಶಯ ಇದೀಗ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಕನ್ನಡ ರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಕನ್ನಡದಲ್ಲೇ ಟ್ವೀಟ್ ಮಾಡಿ ಶುಭ ಕೋರಿದ್ದಾರೆ. ಸಂಸದೆ ಶೋಭಾ ಕರಂದ್ಲಾಜೆ ಅವರು ಮೋದಿ ಅವರ ಟ್ವೀಟನ್ನು ರೀ ಟ್ವೀಟ್ ಮಾಡಿದ್ದಾರೆ. ಆದರೆ ಇದರ ನಡುವೆ ನಾಡಿನ ಜನತೆಗೆ ಶುಭಕೋರುವ ವೇಳೆ ಇಂಗ್ಲಿಷ್‍ನಲ್ಲಿ ಶುಭಕೋರಿದ್ದರು. ಕನ್ನಡ ಜನತೆಗೆ ಇಂದು ವಿಶೇಷ ದಿನವಾಗಿದ್ದು, ರಾಜ್ಯದ ಸಂಸ್ಕೃತಿ ಹಾಗೂ ಸಂಪ್ರದಾಯಗಳ ಬಗ್ಗೆ ಹೆಮ್ಮೆ ಪಡುವ ಸಮಯವಾಗಿದೆ. ಇಂದು ನಮ್ಮ ಐತಿಹಾಸಿಕ ಪರಂಪರೆಯನ್ನು ನೆನೆಯುವ ಮೂಲಕ ಕನ್ನಡ ರಾಜ್ಯೋತ್ಸವ ಆಚರಣೆ ಮಾಡೋಣ ಎಂದು ಶೋಭಾ ಕರಂದ್ಲಾಜೆ ತಮ್ಮ ಟ್ವೀಟಿನಲ್ಲಿ ಬರೆದುಕೊಂಡಿದ್ದರು.

ಆದರೆ ಶೋಭಾ ಅವರ ಇಂಗ್ಲೀಷ್ ಪ್ರೇಮಕ್ಕೆ ನೆಟ್ಟಿಗರು ತೀವ್ರ ಗರಂ ಆಗಿದ್ದು, ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿದ್ದಂತೆಯೇ ಸಂಸದರು ಟ್ವೀಟ್ ಡಿಲೀಟ್ ಮಾಡಿದ್ದಾರೆ.

Comments are closed.