ಕರ್ನಾಟಕ

ರಾಷ್ಟ್ರಪತಿ, ಪ್ರಧಾನ ಮಂತ್ರಿಗಳಿಂದ ರಾಜ್ಯೋತ್ಸವಕ್ಕೆ ಕನ್ನಡದಲ್ಲಿಯೇ ಶುಭಾಶಯ

Pinterest LinkedIn Tumblr


ನವದೆಹಲಿ: 63ನೇ ವರ್ಷದ ಕನ್ನಡ ರಾಜ್ಯೋತ್ಸವಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿಯೇ ಶುಭಾಶಯ ಕೋರಿದ್ದಾರೆ.
‘ಕರ್ನಾಟಕ ರಾಜ್ಯೋತ್ಸವದ ಈ ದಿನದಂದು, ಕರ್ನಾಟಕದ ಜನತೆಗೆ ಹಾರ್ದಿಕ ಅಭಿನಂದನೆಗಳು ಹಾಗೂ ಶುಭಾಶಯಗಳು. ಮುಂಬರುವ ವರ್ಷಗಳಲ್ಲಿ, ಕರ್ನಾಟಕ ರಾಜ್ಯ ಹಾಗೂ ನಮ್ಮ ದೇಶವು ಇನ್ನೂ ಉನ್ನತ ಮಟ್ಟಕ್ಕೇರಲಿ’ ಎಂದಿದ್ದಾರೆ.
ಈ ಕುರಿತು ಟ್ವೀಟ್​ ಮಾಡಿರುವ ಮೋದಿ, ‘ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಕರ್ನಾಟಕದ ನನ್ನ ಸಹೋದರ ಸಹೋದರಿಯರಿಗೆ ಶುಭಾಶಯಗಳು. ಕರ್ನಾಟಕ ಶ್ರೀಮಂತ ಇತಿಹಾಸ ಹೊಂದಿದ್ದು, ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಪ್ರತಿಭಾವಂತರಿಗೆ ನೆಲೆ ನೀಡಿದೆ. ರಾಜ್ಯದ ಜನರ ಸಂತೋಷ ಹಾಗೂ ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಕನ್ನಡ ರಾಜ್ಯೋತ್ಸವ ಶುಭಾಶಯ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯೋತ್ಸವದ ಈ ದಿನದಂದು, ಕರ್ನಾಟಕದ ಜನತೆಗೆ ಹಾರ್ಧಿಕ ಅಭಿನಂದನೆಗಳು ಹಾಗೂ ಶುಭಾಶಯಗಳು. ಮುಂಬರುವ ವರ್ಷಗಳಲ್ಲಿ, ಕರ್ನಾಟಕ ರಾಜ್ಯ ಹಾಗೂ ನಮ್ಮ ದೇಶವು ಇನ್ನೂ ಉನ್ನತ ಮಟ್ಟಕ್ಕೇರಲಿ — ರಾಷ್ಟ್ರಪತಿ ಕೊವಿಂದ್.

— President of India (@rashtrapatibhvn) November 1, 2018
ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಕರ್ನಾಟಕದ ನನ್ನ ಸಹೋದರ ಸಹೋದರಿಯರಿಗೆ ಶುಭಾಶಯಗಳು. ಕರ್ನಾಟಕ ಶ್ರೀಮಂತ ಇತಿಹಾಸ ಹೊಂದಿದ್ದು, ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಪ್ರತಿಭಾವಂತರಿಗೆ ನೆಲೆಯಾಗಿದೆ. ನಾನು ರಾಜ್ಯದ ಜನರ ಸಂತೋಷ ಹಾಗೂ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ.

— Narendra Modi (@narendramodi) November 1, 2018
ಕನ್ನಡ ರಾಜ್ಯೋತ್ಸವ ಕೇವಲ ಉತ್ಸವ ಅಲ್ಲ, ವಿವಿಧ ಪ್ರಾಂತ್ಯಗಳಲ್ಲಿ‌ ಹಂಚಿಹೋಗಿರುವ ಕನ್ನಡಿಗರು ಕನ್ನಡದ ಕರುಳಬಳ್ಳಿ ಹಿಡಿದು ಒಗ್ಗೂಡಿದ ಪವಿತ್ರ ದಿನ.ಈ ಕನ್ನಡದ ಕನಸು ಸಾಕಾರಗೊಳ್ಳಲು ಲಕ್ಷಾಂತರ ಕನ್ನಡಾಭಿಮಾನಿಗಳ ಶ್ರಮ, ತ್ಯಾಗ, ಬಲಿದಾನಗಳನ್ನು ಕೃತಜ್ಞತೆಯಿಂದ ಸ್ಮರಿಸೋಣ.#ಕನ್ನಡರಾಜ್ಯೋತ್ಸವ #KannadaRajyotshva

— Siddaramaiah (@siddaramaiah) November 1, 2018
ಕನ್ನಡಾಭಿಮಾನ ಕನ್ನಡ ರಾಜ್ಯೋತ್ಸವಕ್ಕೆ ಸೀಮಿತವಾಗಬಾರದು. ಅದು ಸದಾ ನಮ್ಮೆದೆಯೊಳಗೆ ಜೀವಂತವಾಗಿರಬೇಕು. ಭಾಷೆಯ ಜತೆ ನಾಡು ಸರ್ವಾಂಗೀಣವಾಗಿ ಬೆಳೆಯಬೇಕು. ಕನ್ನಡಿಗರು ಸಮರ್ಥರಾದರೆ ಕನ್ನಡ ಸಾಮರ್ಥ್ಯ ಪಡೆಯುತ್ತದೆ. ಈಗಿನ ಕರ್ನಾಟಕವನ್ನು ನಿಜವಾದ ಕ‌ನ್ನಡನಾಡಾಗಿ ಕಟ್ಟುವ ಸಂಕಲ್ಪ ಮಾಡೋಣ.#ಕನ್ನಡರಾಜ್ಯೋತ್ಸವ

— Siddaramaiah (@siddaramaiah) November 1, 2018

Comments are closed.