ಕರ್ನಾಟಕ

ನವೆಂಬರ್ 10ರಂದು ಟಿಪ್ಪು ಜಯಂತಿ ಆಚರಣೆಗೆ ರಾಜ್ಯ ಸರ್ಕಾರ ನಿರ್ಧಾರ: ಸಚಿವೆ ಜಯಮಾಲಾ

Pinterest LinkedIn Tumblr

ಬೆಂಗಳೂರು: ನವೆಂಬರ್ 10ರಂದು ಟಿಪ್ಪು ಜಯಂತಿ ಆಚರಣೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಜಯಮಾಲಾ ಅವರು ಶನಿವಾರ ಹೇಳಿದ್ದಾರೆ.

ಇಂದು ವಿಧಾನಸೌಧದದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಯಮಾಲಾ, ಟಿಪ್ಪು ಜಯಂತಿ ಆಚರಿಸಲು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಈಗಾಗಲೇ ನಿರ್ಧರಿಸಿದ್ದಾರೆ ಮತ್ತು ಟಿಪ್ಪು ಜಯಂತಿ ಆಚರಿಸುವುದು ನಮ್ಮ ಕರ್ತವ್ಯ. ಏನಾದರೂ ಅನಾಹುತವಾದರೆ ಅದಕ್ಕೆ ಬಿಜೆಪಿಯವರೇ ಹೊಣೆ ಎಂದರು.

ನಿನ್ನೆಯಷ್ಟೆ ಟಿಪ್ಪು ಜಯಂತಿ ಆಚರಣೆ ಹಿಂದಿನ ಸರ್ಕಾರದಿಂದ ಆರಂಭವಾಗಿದ್ದು, ಈ ವರ್ಷವೂ ಅದು ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಹೇಳಿದ್ದರು.

ಟಿಪ್ಪು ಜಯಂತಿ ಆಚರಣೆ ಕೈಬಿಡಬೇಕೆಂದು ಬಿಜೆಪಿ ಸೇರಿದಂತೆ ಸಂಘ ಪರಿವಾರದ ಮುಖಂಡರು ಸರ್ಕಾರ ಮೇಲೆ ಒತ್ತಡ ಹಾಕುತ್ತಿದ್ದಾರೆ. ಆದರೆ ಈಗ ಜಯಂತಿ ಆಚರಣೆ ಮುಂದುವರಿಯಲಿದೆ ಎಂದು ಸಿಎಂ ಹೇಳಿದ್ದಾರೆ.

Comments are closed.