
ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಎಚ್1ಎನ್1 ಭೀತಿ ಹೆಚ್ಚಾಗಿದ್ದು, ಇಲ್ಲಿವರೆಗೂ 17 ಜನ ಈ ಮಾರಕ ರೋಗಕ್ಕೆ ಬಲಿಯಾಗಿದ್ದಾರೆ.
ಕಳೆದ ಒಂದು ತಿಂಗಳಿನಿಂದ ಈ ಸೋಂಕು ಜನರಲ್ಲಿ ಹೆಚ್ಚಾಗಿದ್ದು, ಈಗಾಗಲೇ ರಾಜ್ಯದಲ್ಲಿ 999 ಎಚ್ 1 ಎನ್ 1 ಪ್ರಕರಣಗಳು ಪತ್ತೆಯಾಗಿದೆ. ಬಹುತೇಕ ಆಸ್ಪತ್ರೆಗಳಲ್ಲಿ ನೆಗಡಿ, ಕೆಮ್ಮು, ಜ್ವರ ಸೇರಿದಂತೆ ಉಸಿರಾಟದ ತೊಂದರೆಯಿಂದ ಚಿಕಿತ್ಸೆಗೆ ದಾಖಲಾಗುತ್ತಿರುವವರ ಸಂಖ್ಯೆ ಅಧಿಕವಾಗಿದೆ ಎಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಎಚ್ 1ಎನ್ 1 ವರದಿಯಲ್ಲಿ ಉಲ್ಲೇಖವಾಗಿದೆ.
ಇನ್ನು ರಾಜಧಾನಿಯಲ್ಲಿಯೂ ಈ ಪ್ರಕರಣಗಳು ಹೆಚ್ಚಾಗಿದ್ದು, ಈ ಸೋಂಕಿನಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ 190 ಪ್ರಕರಣಗಳು ದಾಖಲಾಗಿದ್ದು, 17 ಜನ ಸಾವನ್ನಪ್ಪಿದ್ದಾರೆ. ಎಚ್1ಎನ್1 ತಡೆಗಟ್ಟಲು ಆರೋಗ್ಯ ಇಲಾಖೆ ಎಲ್ಲ ಕ್ರಮ ಕೈಗೊಂಡಿದ್ದು, ಈ ಬಗ್ಗೆ ಜಾಗೃತಿ ಕೂಡ ಮೂಡಿಸಲಾಗಿದೆ.
ಹಂದಿಜ್ವರ ಎಂದೇ ಖ್ಯಾತಿ ಹೊಂದಿರುವ ಈ ಕಾಯಿಲೆ ಒಬ್ಬರಿಂದ ಒಬ್ಬರಿಗೆ ಶೀಘ್ರವಾಗಿ ಹರಡುವುದರಿಂದ ಸೋಂಕು ಹರಡುವುದರಿಂದ ದ್ವಿಗುಣಗೊಳ್ಳುತ್ತಿದೆ. ನೀರಿನ ಸೇವನೆಯಿಂದ ಈ ಕಾಯಿಲೆ ಜನರಿಗೆ ತಗಲುತ್ತಿದ್ದು, ಸ್ವಲ್ಪ ಜ್ವರ, ಕೆಮ್ಮು, ನೆಗಡಿ, ಜ್ವರದಿಂದ ಬಳಲುತ್ತಿದ್ದರೆ, ಆಸ್ಪತ್ರೆಗೆ ಸೂಕ್ತ ಚಿಕಿತ್ಸೆಗೆ ಮುಂದಾಗಬೇಕು ಆರೋಗ್ಯ ಇಲಾಖೆ ತಿಳಿಸಿದೆ.
ಇನ್ನು ಜಿಲ್ಲಾ ಮಟ್ಟದಲ್ಲಿ ಕೂಡ ರೋಗದ ಸೋಂಕಿನ ಬಗ್ಗೆ ಅರಿವು ಮೂಡಿಸಲು ಜಿಲ್ಲಾ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಹಿಂದೆ ಈ ಬಗ್ಗೆ ಉಪಮುಖ್ಯಮಂತ್ರಿ ಜಿ ಪರಮೇಶ್ವರ್ ಕೂಡ ಮೇಯರ್, ಅಧಿಕಾರಿಗಳ ಸಭೆ ನಡೆಸಿ ರೋಗ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಕುರಿತು ಚರ್ಚೆ ನಡೆಸಿದ್ದರು.
Comments are closed.