ಶಿವಮೊಗ್ಗ: ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ ರಾಘವೇಂದ್ರ ಜಯ ಗಳಿಸಿದ್ದಾರೆ. ಆದರೆ ಶಿವಮೊಗ್ಗದ ಪ್ರಬಲ ಬಿಜೆಪಿ ನಾಯಕ ಯಡಿಯೂರಪ್ಪ ಅವರಿಗೆ ಹಿನ್ನಡೆಯಾಗಿದೆ ಎಂದು ಹೇಳಲಾಗುತ್ತಿದೆ.
2014ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಯಡಿಯೂರಪ್ಪ 3.60 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಆದರೆ ಈ ಉಪ ಚುನಾವಣೆಯಲ್ಲಿ 52,148 ಸಾವಿರ ಮತಗಳ ಅಂತರದಿಂದ ಮಾತ್ರ ಜಯ ಸಾಧಿಸಿದ್ದಾರೆ.
ಸಿಎಂ ಕುಮಾರ ಸ್ವಾಮಿ ಸೇರಿದಂತೆ ಕಾಂಗ್ರೆಸ್ ಜೆಡಿಎಸ್ ಘಟಾನುಘಟಿ ನಾಯಕರುಗಳಾದ ಎಚ್.ಡಿ ದೇವೇಗೌಡ. ಮಾಜಿ ಸಿಎಂ ಸಿದ್ದರಾಮಯ್ಯ ಬಂದು ಪ್ರಚಾರ ಮಾಡಿದರೂ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಗೆಲುವು ಸಾಧಿಸಲಾಗಲಿಲ್ಲ,
ಈ ಕ್ಷೇತ್ರದಲ್ಲಿ,65.24 ರಷ್ಟು ಮತದಾನವಾಗಿದೆ, ಅದರಲ್ಲಿ ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳು ಕ್ಷೇತ್ರದ ಮೂಲೆ ಮೂಲೆ ತಲುಪದಿರುವುದು ಸೋಲಿಗೆ ಕಾರಣ ಎಂದು ಹೇಳಲಾಗುತ್ತಿದೆ. ಆದರೆ ಮಗನ ಪರ ಯಡಿಯೂರಪ್ಪ ಅಬ್ಬರದ ಪ್ರಚಾರ ಮಾಡಿದರೂ ಹೆಚ್ಚಿನ ಅಂತರದಲ್ಲಿ ಗೆಲ್ಲಿಸಲು ವಿಫಲರಾಗಿದ್ದಾರೆ.
ಶಿವಮೊಗ್ಗ ಗೆಲುವು ಪಕ್ಷಕ್ಕೆ ಹಿನ್ನಡೆಯಲ್ಲ, ನಾವು 2 ಲಕ್ಷ ಮತಗಳ ಅಂತರ ನಿರೀಕ್ಷಿಸಿದ್ದೆವು, ಮತದಾನದದ ಪ್ರಮಾಣದಲ್ಲಿ ಕಡಿಮೆಯಾಗಿದ್ದರಿಂದ ಮತಗಳ ಪ್ರಮಾಣ ಕಡಿಮೆಯಾಗಿದೆ. ಮತದಾನ ಮಾಡದ ಶೇ. 15ರಷ್ಟು ಮತದಾರರು ವಿದ್ಯಾವಂತರು, ಹೀಗಿದ್ದರೂ ಕೂಡ ಅವರು ಬೂತ್ ಗೆ ತೆರಳಿ ಮತದಾನ ಮಾಡಿಲ್ಲ, ನಮಗೆ ಈಡಿಗ ಸಮುದಾಯದ ಮತಗಳು ಹೆಚ್ಚಿಗೆ ಬಂದಿವೆ, ಸಿಎಂ ಕುಮಾರಸ್ವಾಮಿ ಶಿವಮೊಗ್ಗದಲ್ಲಿ ನಾಲ್ಕು ದಿನ ಪ್ರಚಾರ ಮಾಡಿದರು. ಸಿದ್ದರಾಮಯ್ಯ, ದೇವೇಗೌಡ ಕೂಡ ಎರಡೆರಡು ಬಾರಿ ಬಂದು ಪ್ರಚಾರ ಮಾಡಿದರೂ ಪ್ರಯೋಜನವಾಗಿಲ್ಲ, ಮಧು ಅವರನ್ನು ಗೆಲ್ಲಿಸಲು ವಿಫಲರಾಗಿದ್ದಾರೆ ಎಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷ ರುದ್ರೇಗೌಡ ಹೇಳಿದ್ದಾರೆ.
ಕರ್ನಾಟಕ
Comments are closed.