ಕರ್ನಾಟಕ

ಬೆಂಗಳೂರಿನಲ್ಲಿ ಒಂಟಿ ಮಹಿಳೆ ಮನೆಗೆ ನುಗ್ಗಿ ಅತ್ಯಾಚಾರ ಎಸಗಿದ ಕಾಮುಕ

Pinterest LinkedIn Tumblr

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಒಂಟಿ ಮಹಿಳೆ ಮನೆಗೆ ನುಗ್ಗಿದ ಕಾಮುಕನೊಬ್ಬ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದು, ಜನರು ಆತಂಕಕ್ಕೊಳಗಾಗಿದ್ದಾರೆ.

ಬಸವೇಶ್ವರನಗರದಲ್ಲಿ ಗುರುವಾರ ತಡರಾತ್ರಿ ಮನೆಗೆ ನುಗ್ಗಿದ ಕಾಮುಕ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ.

ಒಂಟಿ ಮಹಿಳೆ ಎಂದು ಅರಿತ ಆರೋಪಿ ಆಕೆಯನ್ನು ಹಿಂಬಾಲಿಸಿ ಮನೆಯ ಬೆಲ್​ ಮಾಡಿದ್ದಾನೆ. ಬಾಗಿಲು ತೆಗೆದ ತಕ್ಷಣ ಮಹಿಳೆಯ ಕುತ್ತಿಗೆಗೆ ಚಾಕು ಇಟ್ಟು ಬೆದರಿಸಿ ಮನೆಯೊಳಗೆ ನುಗ್ಗಿ ಬಾಗಿಲು ಮುಚ್ಚಿದ್ದಾನೆ. ಕೂಗಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ಮಹಿಳೆ ಜತೆಗೆ ಬಳಿಕ ಮಹಿಳೆ ಜತೆ ಲೈಂಗಿಕ ಕ್ರಿಯೆಗೆ ಮುಂದಾಗಿದ್ದಾನೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ ಮಾಡಿ ಅತ್ಯಾಚಾರ ಎಸಗಿದ್ದಾನೆ.

ಅತ್ಯಾಚಾರ ಮಾಡಿ ಮನೆಯಲ್ಲೇ ಕೆಲ ಕಾಲ ಇದ್ದ ದುಷ್ಕರ್ಮಿಯು ಮೇಲಿಂದ ಮೇಲೆ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ದೂರು ನೀಡಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ಅಲ್ಲಿಂದ ಎಸ್ಕೇಪ್​ ಆಗಿದ್ದಾನೆ.

ಈ ಕುರಿತು ಸಂತ್ರಸ್ತೆಯಿಂದ ಬಸವೇಶ್ವರ ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಸುಮಾರು 2 ಕಿ.ಮೀ. ವ್ಯಾಪ್ತಿಯ ಸಿಸಿ ಕ್ಯಾಮರಾ ದೃಶ್ಯಾವಳಿಗಳ ಪರಿಶೀಲನೆ ನಡೆಸಲಾಗಿದೆ. ಆರೋಪಿ ಮನೆಯಿಂದ ಎಸ್ಕೇಪ್​ ಆಗಿರುವ ದೃಶ್ಯಗಳು ಪತ್ತೆಯಾಗಿವೆ.

ಆರೋಪಿಯ ಸುಳಿವು ಪಡೆದಿರುವ ಬಸವೇಶ್ವರ ನಗರ ಪೊಲೀಸರು, ಕಾಮುಕನ ಪತ್ತೆಗಾಗಿ ವಿಶೇಷ ತಂಡ ರಚಿಸಿದ್ದಾರೆ. ಸೈಕೋಪಾತ್​ಗಾಗಿ 2 ದಿನಗಳಿಂದ ಹಗಲು ರಾತ್ರಿ ಶೋಧ ಕಾರ್ಯ ಕೈಗೊಂಡಿದ್ದಾರೆ.

Comments are closed.