ಬೆಂಗಳೂರು: ಡೀಲ್ ಪ್ರಕರಣ ಸಂಬಂಧ ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ ಇಂದು ಸಿಸಿಬಿ ಕಚೇರಿಗೆ ಆಗಮಿಸಿದ್ದಾರೆ.
‘ ನಾನು ಎಲ್ಲಿಯೂ ಹೋಗಿಲ್ಲ. ಬೆಂಗಳೂರಿನಲ್ಲಿಯೇ ಇದ್ದೇನೆ ಎಂದು ಅಜ್ಞಾತ ಸ್ಥಳದಿಂದ ವೀಡಿಯೋ ಸಂದೇಶ ರವಾನಿಸಿದ್ದ ರೆಡ್ಡಿ, ವಕೀಲ ಚಂದ್ರಶೇಖರ್ ಜತೆ ಸಿಸಿಬಿ ಪೊಲೀಸರ ಮುಂದೆ ಪ್ರತ್ಯಕ್ಷವಾಗಿದ್ದಾರೆ.
ಆ್ಯಂಬಿಡೆಂಟ್ ವಂಚನೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಲ್ಲಿ ದಾಖಲಾಗಿರುವ ಕೇಸ್ ಕ್ಲೋಸ್ ಮಾಡಿಸಿಕೊಡುವುದಾಗಿ 57 ಕೆ.ಜಿ ಚಿನ್ನ ಪಡೆದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರಿಗೆ ಸಿಸಿಬಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.
ಇದರ ಮಧ್ಯೆ ಹೂಡಿಕೆದಾರರ ಪರವಾಗಿ ಮತ್ತೊಬ್ಬ ವಕೀಲರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ,”ರೆಡ್ಡಿಗೆ ಜಾಮೀನು ನೀಡಬಾರದು,” ಎಂದು ಬೇಡಿಕೆ ಮುಂದಿಟ್ಟಿದ್ದಾರೆ.
Comments are closed.