
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದ ವೇಳೆ ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ ಅವರು ಟಿಪ್ಪು ಜಯಂತಿ ಆಚರಣೆ ಆರಂಭಿಸಿದ್ದರು. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಬಂದಮೇಲೂ ಈ ಆಚರಣೆ ಮುಂದುವರಿಸಿಕೊಂಡು ಹೋಗುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಈಗ ಅವರಿಗೆ ಹೊಸ ಬಿರುದೊಂದು ಸಿಕ್ಕಿದೆ. ಅದೇನು ಎಂಬುದನ್ನು ತಿಳಿಯಲು ಮುಂದೆ ಓದಿ.
ಟಿಪ್ಪು ಜಯಂತಿ ಸಂದರ್ಭದಲ್ಲಿ ಸಿದ್ದರಾಮಯ್ಯಗೆ ಮುಸಲ್ಮಾನ ಧರ್ಮಗುರುಗಳು ಖಡ್ಗ ಹಾಗೂ ಟಿಪ್ಪು ಟೋಪಿ ಹಾಕಿ ಸನ್ಮಾನ ಮಾಡಿದರು. ಈ ವೇಳೆ ಅಲ್ಲಿ ನೆರೆದಿದ್ದವರು, ‘ಟೈಗರ್ ಆಫ್ ಕರ್ನಾಟಕ ಸಿದ್ದರಾಮಯ್ಯ ಅವರಿಗೆ ಜಯವಾಗಲಿ’ ಎನ್ನುವ ಘೋಷಣೆ ಕೂಗಿದ್ದಾರೆ. ಈ ಮೂಲಕ ಅವರಿಗೆ ಹೊಸ ಬಿರುದು ಸಿಕ್ಕಂತಾಗಿದೆ.
ಈ ವೇಳೆ ಮಾತನಾಡಿರುವ ಸಿದ್ದರಾಮಯ್ಯ, ‘ಟಿಪ್ಪು ಹಿಂದು ವಿರೋಧಿ ಎಂಬುದು ಶುದ್ಧ ಸುಳ್ಳು. ಅವರ ಕಾಲದಲ್ಲಿ ಹಲವು ಹಿಂದುಗಳು ಪ್ರಮುಖ ಹುದ್ದೆಯಲ್ಲಿದ್ದರು. ರಾಜ್ಯದ ಜನರಿಗೆ ಟಿಪ್ಪು ಜಯಂತಿಯ ಶುಭಾಶಯಗಳು’ ಎಂದಿದ್ದಾರೆ.
ಈ ಕುರಿತು ಸಾಲು ಸಾಲು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ‘ಟಿಪ್ಪು ಬಗ್ಗೆ ತಿಳಿದುಕೊಳ್ಳಬೇಕಾಗಿರುವುದು ವೈರಿಗಳಾಗಿದ್ದ ಬ್ರಿಟಿಷ್ ಇತಿಹಾಸಕಾರರಿಂದಲ್ಲ. ಟಿಪ್ಪು ಬಗ್ಗೆ ಮೈಸೂರು ಭಾಗದಲ್ಲಿ ಲಾವಣಿಗಳಿವೆ. ಅವುಗಳಲ್ಲಿ ಟಿಪ್ಪುವಿನ ದೇಶಪ್ರೇಮ,ಜಾತ್ಯತೀತ ಧೋರಣೆ, ಅಭಿವೃದ್ದಿಯ ಕಲ್ಪನೆಗಳ ಮಾಹಿತಿ ಇದೆ. ಈ ಲಾವಣಿ, ಪದ,ಹಾಡುಗಳೇನಿಜವಾದ ಇತಿಹಾಸ’ ಎಂದಿದ್ದಾರೆ.
ಟಿಪ್ಪು ಬಗ್ಗೆ ತಿಳಿದುಕೊಳ್ಳಬೇಕಾಗಿರುವುದು ವೈರಿಗಳಾಗಿದ್ದ ಬ್ರಿಟಿಷ್ ಇತಿಹಾಸಕಾರರಿಂದಲ್ಲ. ಟಿಪ್ಪು ಬಗ್ಗೆ ಮೈಸೂರು ಭಾಗದಲ್ಲಿ ಲಾವಣಿಗಳಿವೆ. ಅವುಗಳಲ್ಲಿ ಟಿಪ್ಪುವಿನ ದೇಶಪ್ರೇಮ,ಜಾತ್ಯತೀತ ಧೋರಣೆ,ಅಭಿವೃದ್ದಿಯ ಕಲ್ಪನೆಗಳ ಮಾಹಿತಿ ಇದೆ.
ರಾಜ್ಯ ಸರ್ಕಾರ ಆಚರಿಸುತ್ತಿರುವುದು ಯಾವುದೇ ಒಂದು ಧರ್ಮಕ್ಕೆ ಸಂಬಂಧಿಸಿದ್ದಲ್ಲ. ಇದು ದೇಶಪ್ರೇಮಿಯ ಜನ್ಮದಿನಾಚರಣೆ ಆಚರಿಸುತ್ತಿದ್ದೇವೆ. ಟಿಪ್ಪು ಯುದ್ಧದ ವೇಳೆ ಜನರನ್ನು ಸಾಯಿಸಿದ್ದ ಲೂಟಿ ಮಾಡಿದ್ದ ಎನ್ನುವುದು ವಿರೋಧಿಗಳ ಆರೋಪ. ಟಿಪ್ಪು ಕಾಲದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇರಲಿಲ್ಲ, ಟಿಪ್ಪು ಪ್ರಜಾತಾಂತ್ರಿಕವಾಗಿ ಆಯ್ಕೆಯಾದವನ್ನಲ್ಲ. ಆತ ಒಬ್ಬ ರಾಜ. ಆ ಕಾಲದಲ್ಲಿ ಯುದ್ದಧರ್ಮಕ್ಕೆ ತಕ್ಕಂತೆ ನಡೆದುಕೊಂಡಿದ್ದ’ ಎಂದಿದ್ದಾರೆ.
Comments are closed.