ಕರ್ನಾಟಕ

ಆ್ಯಂಬಿಡೆಂಟ್ ಬಹುಕೋಟಿ ವಂಚನೆ ಪ್ರಕರಣ; ನ. 24ರವರೆವಿಗೂ ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ನ್ಯಾಯಾಂಗ ಬಂಧನ: ಪರಪ್ಪನ ಅಗ್ರಹಾರ ಜೈಲು ಸೇರಿದ ರೆಡ್ಡಿ

Pinterest LinkedIn Tumblr

ಬೆಂಗಳೂರು: ಆ್ಯಂಬಿಡೆಂಟ್ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಯವರನ್ನ ನವೆಂಬರ್ 24ರವರೆವಿಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಪ್ರಕರಣ ಸಂಬಂಧ ನಿನ್ನೆ ತಡರಾತ್ರಿವರೆವಿಗೂ ಸವಿಸ್ತಾರವಾಗಿ ವಿಚಾರಣೆ ನಡೆಸಿದ ಸಿಸಿಬಿ ಪೊಲೀಸರು ಇಂದು ಮಧ್ಯಾಹ್ನ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದ ಬಳಿಕ ಕೋರಮಂಗಲದಲ್ಲಿರುವ ನ್ಯಾಯಾಧೀಶರ ಎದುರು ಜನಾರ್ಧನ ರೆಡ್ಡಿಯನ್ನು ಹಾಜರುಪಡಿಸಿದರು.

1ನೇ ಎಸಿಎಂಎಂಎಂ ನ್ಯಾಯಾಧೀಶ ಜಗದೀಶ್ , ನವೆಂಬರ್ 24ರವರೆವಿಗೂ 14 ದಿನಗಳ ಕಾಲ ಜನಾರ್ಧನ ರೆಡ್ಡಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ತೀರ್ಪಿ ಪ್ರಕಟಿಸಿದರು. ನಂತರ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಾಯಿತು.

ಇದರಿಂದಾಗಿ ಮೂರನೇ ಬಾರಿಗೆ ಮಾಜಿ ಸಚಿವ, ಗಣಿ ಉದ್ಯಮಿ ಜನಾರ್ಧನ ರೆಡ್ಡಿ ಪರಪ್ಪನ ಅಗ್ರಹಾರದ ಜೈಲು ಸೇರುವಂತಾಗಿದೆ.ಈ ಮಧ್ಯೆ ನಾಳೆ ಜನಾರ್ದನ ರೆಡ್ಡಿ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

Comments are closed.