ಕರ್ನಾಟಕ

ಹೊನ್ನಾವರದ ಆರೊಳ್ಳಿ ಕ್ರಾಸ್ ಬಳಿ ನಿಯಂತ್ರಣ ತಪ್ಪಿ ಗುಡ್ಡಕ್ಕೆ ಡಿಕ್ಕಿ ಹೊಡೆದ ಕಾರು: ಮೂವರು ಸಾವು-ಏಳುಮಂದಿಗೆ ಗಾಯ

Pinterest LinkedIn Tumblr

ಹೊನ್ನಾವರ: ಅತೀ ವೇಗದ ಚಾಲನೆಯಿಂದ ನಿಯಂತ್ರಣ ತಪ್ಪಿದ ಸ್ಕಾರ್ಪಿಯೋ ವಾಹನವು ಗುಡ್ಡಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಆರೊಳ್ಳಿ ಕ್ರಾಸ್ ಬಳಿ ನಡೆದಿದೆ.

ಮೃತರನ್ನು ಫಾತಿಮಾ, ರುಕಿಯಾ, ಚಾಬುಸಾಬ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಆನಂದಪುರ ಮೂಲದವರು ಎಂದು ಹೇಳಲಾಗುತ್ತಿದೆ. ಗೋವಾದಲ್ಲಿ ಮದುವೆ ಕಾರ್ಯ ಮುಗಿಸಿ ವಾಪಸ್ಸಾಗುತ್ತಿದ್ದಾಗ ಇಂದು ಬೆಳಗ್ಗಿನ ಜಾವ ಈ ಅಪಘಾತ ಸಂಭವಿಸಿದೆ.

ಕಾರಿನಲ್ಲಿದ್ದ 7 ಜನರ ಸ್ಥಿತಿ ಗಂಭೀರವಾಗಿದ್ದು ಗಾಯಾಳುಗಳನ್ನು ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ. ಹೊನ್ನಾವರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Comments are closed.