ಕರ್ನಾಟಕ

ಪಂಚಭೂತಗಳಲ್ಲಿ ಲೀನರಾದ ಅನಂತ್ ಕುಮಾರ್; ಚಾಮರಾಜಪೇಟೆ ರುದ್ರಭೂಮಿಯಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ

Pinterest LinkedIn Tumblr

ಬೆಂಗಳೂರು: ರಾಜ್ಯ ಬಿಜೆಪಿಯ ಹಿರಿಯ ತಲೆಯಾಳು, ರಾಜಕೀಯ ಚತುರ, ಸತತ ಆರು ಬಾರಿ ಲೋಕಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿ ಸೋಲಿಲ್ಲದ ಸರದಾರ ಎನ್ನಿಸಿಕೊಂಡಿದ್ದ ಕೇಂದ್ರ ಸಂಸದೀಯ ವ್ಯವಹಾರ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಹೆಚ್.ಎನ್. ಅನಂತ್ ಕುಮಾರ್ ಅವರು, ಚಾಮರಾಜಪೇಟೆಯ ಹಿಂದುರುದ್ರಭೂಮಿಯಲ್ಲಿ ಪಂಚಭೂತಗಳಲ್ಲಿ ಲೀನರಾಗಿದ್ದಾರೆ.

ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ವಿಧಿವಿಧಾನ ಹಾಗೂ ಸಕಲ ಸರ್ಕಾರಿ ಗೌರವಾಧಾರಗಳೊಂದಿಗೆ ಅನಂತ್ ಕುಮಾರ್ ಅವರು ಅಂತಿಮ ಸಂಸ್ಕಾರ ನೆರವೇರಿತು.

ಕೇಂದ್ರ ಸಚಿವ ಅನಂತ್​ ಕುಮಾರ್​ ಅವರು ಬಹು ಅಂಗಾಂಗ ವೈಫಲ್ಯದಿಂದ ಸೋಮವಾರ ಬೆಳಗಿನ ಜಾವ 3 ಗಂಟೆಗೆ ಮೃತಪಟ್ಟಿದ್ದರು. ಶ್ವಾಸಕೋಶದ ಕ್ಯಾನ್ಸರ್​ಗೆ ತುತ್ತಾಗಿದ್ದ ಅವರು ಅಮೆರಿಕಾದಲ್ಲಿ ಚಿಕಿತ್ಸೆ ಪಡೆದು ವಾಪಸ್​ ಆಗಿದ್ದರು. ಕಳೆದ 20 ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು.

ನಿನ್ನೆ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಪ್ರಧಾನಿ ಮೋದಿಯವರು ಆಗಮಿಸಿ ಅಂತಿಮ ದರ್ಶನ ಪಡೆದಿದ್ದರು. ಇಂದು ಕೂಡ ಹಲವು ಗಣ್ಯರು, ಕೇಂದ್ರ ಸಚಿವರು, ರಾಷ್ಟ್ರ ನಾಯಕರು ಆಗಮಿಸಿ ಪುಷ್ಪನಮನ ಸಲ್ಲಿಸಿದರು. ಎಲ್.ಕೆ.ಆಡ್ವಾಣಿ, ಅಮಿತ್​ ಷಾ ಸೇರಿ ಹಲವು ಗಣ್ಯರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡರು.

ಅನಂತಕುಮಾರ್​ ಅವರು ರಾಸಾಯನಿಕ, ಸಂಸದೀಯ ವ್ಯವಹಾರಗಳ ಖಾತೆ ಸಚಿವರಾಗಿದ್ದು ತನ್ನ ಸಂಪುಟ ಸಹೋದ್ಯೋಗಿಗಳಿಗೆ ಅಚ್ಚುಮೆಚ್ಚಾಗಿದ್ದರು. ಅವರೊಬ್ಬ ಧೀಮಂತ, ದೂರದೃಷ್ಟಿಯುಳ್ಳ ನಾಯಕ ಎಂದು ಹಲವರು ಹೊಗಳಿದ್ದಾರೆ. ಅದರಲ್ಲೂ ಕರ್ನಾಟಕದಲ್ಲಿ ಬಿಜೆಪಿ ಪಕ್ಷ ಕಟ್ಟುವಲ್ಲಿ ಅವರ ಪಾತ್ರ ತುಂಬ ಮಹತ್ವದ್ದಾಗಿತ್ತು.

Comments are closed.