ಬೆಂಗಳೂರು: ತನ್ನ ವಿರುದ್ಧದ ಎಫ್‍ಐಆರ್ ರದ್ದು ಕೋರಿ ನಟಿ ಶೃತಿ ಹರಿಹರನ್ ಹೈಕೋರ್ಟ್ ಮೆಟ್ಟಿಲು ಏರಿದ್ದಾರೆ.
ಶೃತಿ ಹರಿಹರನ್ ಮೀಟೂ ವೇದಿಕೆಯಲ್ಲಿ ನಟ ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರು ತಾರೆಯರು ಪೊಲೀಸ್ ಠಾಣೆ ಮೆಟ್ಟಿಲು ಏರಿದ್ದರು. ಇತ್ತ ಅರ್ಜುನ್ ಸರ್ಜಾ ಆಪ್ತ ಪ್ರಶಾಂತ್ ಸಂಬರಗಿ ನಟಿಯ ವಿರುದ್ಧ ದೂರು ದಾಖಲಿಸಿದ್ದರು. ದೂರು ದಾಖಲಿಸಿಕೊಂಡಿದ್ದ ಸೈಬರ್ ಪೊಲೀಸರು ಶೃತಿ ಹರಿಹರನ್ ವಿರುದ್ಧ ಎಫ್‍ಐಆರ್ ದಾಖಲಿಸಿಕೊಂಡಿದ್ದರು.
ನನ್ನ ಮೇಲೆ ದುರುದ್ದೇಶಪೂರಿತವಾಗಿ ಕೇಸ್ ದಾಖಲಾಗಿಸಲಾಗಿದೆ ಎಂದು ಆರೋಪಿಸಿರುವ ಶೃತಿ ಎಫ್‍ಐಆರ್ ರದ್ದು ಪಡಿಸಬೇಕೆಂದು ಹೈಕೋರ್ಟ್ ಕದ ತಟಿದ್ದಾರೆ. ಈ ಅರ್ಜಿಯ ವಿಚಾರಣೆ ಬುಧವಾರ ನಡೆಯುವ ಸಾಧ್ಯತೆಗಳಿವೆ. ಇನ್ನೊಂದು ಕಡೆ ಶೃತಿ ಹರಿಹರನ್ ದಾಖಲಿಸಿರೋ ಎಫ್‍ಐಆರ್ ರದ್ದು ಕೋರಿ ಅರ್ಜುನ್ ಸರ್ಜ್ ಸಲ್ಲಿಸಿರೋ ಅರ್ಜಿಯ ವಿಚಾರಣೆ ನಾಳೆ ಬರಲಿದೆ. ಈ ಅರ್ಜಿಗೆ ಸಂಬಂಧಿಸಿದಂತೆ ಈಗಾಗಲೇ ಸರ್ಜಾ ಪರ ವಕೀಲರು ವಾದ ಮಂಡಿಸಿದ್ದು, ಸರ್ಕಾರಿ ವಕೀಲರು ನಾಳೆ ವಾದ ಮಂಡಿಸಲಿದ್ದಾರೆ.
ಪ್ರಶಾಂತ್ ಸಂಬರ್ಗಿ ವಿರುದ್ಧ ದೂರು ನೀಡಿದ್ದ ಶೃತಿ?
ಫಿಲಂ ಚೇಂಬರ್ ನಲ್ಲಿ ಸಭೆ ನಡೆಯುತ್ತಿದ್ದ ವೇಳೆ ಫಿಲಂ ಚೇಂಬರ್ ಕಟ್ಟಡದ ಒಳಗೆ ಮತ್ತು ಹೊರಗೆ ನಮ್ಮ ಪ್ರಕರಣ ಸಂಬಂಧ ಪಡದ ಅನಪೇಕ್ಷಿತ ವ್ಯಕ್ತಿಗಳು ಜಮಾವಣೆಗೊಂಡಿದ್ದರು. ಈ ಸಂದರ್ಭ ದುರ್ಬಳಕೆ ಮಾಡಿಕೊಂಡ ಪ್ರಶಾಂತ್ ಸಂಬರ್ಗಿ ಎಂಬ ವ್ಯಕ್ತಿ ಗೂಂಡಾಗಳ ಜೊತೆ ಜಮಾವಣೆಗೊಂಡಿದ್ದರು. ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಶಾಂತ್ ಸಂಬರ್ಗಿ, ಅವಳು ಶೃತಿ ಹರಿಹರನ್ ಹಿಂದೂ ಜನರ ಭಾವನೆಗಳಿಗೆ ಧಕ್ಕೆ ತರುವಂತೆ ವರ್ತಿಸಿದ್ದಾಳೆ ಎಂದು ಹೇಳಿದ್ದಾನೆ. ಇದು ನನ್ನನ್ನು ಧರ್ಮವೊಂದಕ್ಕೆ ಎತ್ತಿಕಟ್ಟುವ ಅಪರಾಧವಾಗಿರುತ್ತದೆ. ಮುಂದುವರಿದು ವಿದೇಶಿ ಹಣದಲ್ಲಿ ಮಾಧ್ಯಮಗಳಿಗೆ ಹಣ ನೀಡಿ ಮಹಿಳಾ ದೌರ್ಜನ್ಯ ವಿರೋಧಿ ಸುದ್ದಿಗಳನ್ನು ಮಾಡಿದ್ದಾಳೆ ಎಂದು ಹೇಳಿದ್ದಾರೆ ಎಂದು ಶೃತಿ ಆರೋಪಿಸಿದ್ದರು.
Comments are closed.