ಕರ್ನಾಟಕ

ಕಬ್ಬು ಕಿಚ್ಚು …ಪ್ರತಿಭಟನಾ ಮೆರವಣಿಗೆ ನಡೆಸಿದ ರೈತರಿಂದ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನ; ನಾಳೆ ರೈತರ ಭೇಟಿಗೆ ಸಿಎಂ ನಿರ್ಧಾರ

Pinterest LinkedIn Tumblr

ಬೆಂಗಳೂರು: ಕಬ್ಬಿಗೆ ಬೆಂಬಲ ಬೆಲೆ, ಕಬ್ಬಿನ ಬಾಕಿ ಬಿಡುಗಡೆ ಹಾಗೂ ಸಾಲ ಮನ್ನಾ ಸೇರಿದಂತೆ ವಿವಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೆಳಗಾವಿಯಲ್ಲಿ ಬೀದಿಗಿಳಿದಿದ್ದ ರೈತರ ಹೋರಾಟ ಸೋಮವಾರ ಶಕ್ತಿ ಕೇಂದ್ರ ವಿಧಾನಸೌಧಕ್ಕೂ ಬಂದು ತಲುಪಿದೆ.

ಇಂದು ನಗರದ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನವನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ರೈತರು, ನಂತರವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ, ಪೊಲೀಸರು ರೈತರನ್ನು ಸ್ವಾತಂತ್ರ್ಯ ಉದ್ಯಾನವನದ ಬಳಿಯೇ ತಡೆ ಹಿಡಿದಿದ್ದಾರೆ.

ರಾಜ್ಯದ ವಿವಿಧ ಜಿಲ್ಲೆಗಳಿಂದ ರೈತರು ಬೆಂಗಳೂರಿಗೆ ಆಗಮಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯಿಂದಾಗಿ, ಶೇಷಾದ್ರಿ ರಸ್ತೆ ಸಂಪೂರ್ಣ ಬಂದ್ ಆಗಿದ್ದು, ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.

ರೈತರ ಪ್ರತಿಭಟನೆಯ ಬಿಸಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೂ ತಟ್ಟಿದ್ದು, ನಾಳೆ ಮಧ್ಯಾಹ್ನ 12.30ಕ್ಕೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತರನ್ನು ಭೈಟಿ ಮಾಡಲು ನಿರ್ಧರಿಸಿದ್ದಾರೆ.

ರೈತರು ತಾಳ್ಮೆ ಕಳೆದುಕೊಳ್ಳಬಾರದು. ಸಾಲ ಮನ್ನಾ ಜಾರಿಗೆ ಇನ್ನಷ್ಟು ಕಾಲಾವಕಾಶ ಬೇಕು. ಸಾಲ ಮನ್ನಾದಿಂದ ಎಲ್ಲಾ ಸಮಸ್ಯೆಗಳು ಬಗೆಹರಿಯುವುದಿಲ್ಲ. ಆದರೆ ಸಾಲ ಮುಕ್ತರಾಗುವುದರಿಂದ ಹೊಸತನ ಬರುತ್ತದೆ ಎಂದು ಸಿಎಂ ಕುಮಾರಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸುವರ್ಣಸೌಧ ಗೇಟ್​ ಮುರಿಯಲು ಯತ್ನಿಸಿದವರು ನಿಜವಾದ ರೈತರಾ? ಗೂಂಡಾಗಳಾ? ರೈತರು ಶಾಂತಿಪ್ರಿಯರು. ಗೇಟ್​ ಮುರಿಯಲು ಯತ್ನಿಸಿದವರು ನನ್ನ ರೈತರಲ್ಲ. ರೈತರ ಹೆಸರಿನಲ್ಲಿ ಗೂಂಡಾಗಳು ಅನಗತ್ಯ ಸಮಸ್ಯೆ ಸೃಷ್ಟಿಸುತ್ತಿದ್ದಾರೆ ಎಂದು ಹೇಳಿದ್ದರು.

Comments are closed.