ಕರ್ನಾಟಕ

ಮ್ಯಾಜಿಸ್ಟ್ರೇಟ್​ ಮುಂದೆ ಶರಣಾದ ರೆಡ್ಡಿ ಆಪ್ತ ಅಲಿಖಾನ್​; ನ. 27ರವರೆಗೆ ನ್ಯಾಯಾಂಗ ಬಂಧನ

Pinterest LinkedIn Tumblr


ಬೆಂಗಳೂರು: ಇಂದು ಜನಾರ್ದನ ರೆಡ್ಡಿ ಆಪ್ತ ಅಲಿಖಾನ್​ ನಿರೀಕ್ಷಣಾ ಜಾಮೀನು ವಿಚಾರಣೆ ನಡೆಸಿದ 61ನೇ ಸೆಷನ್ಸ್​ ಕೋರ್ಟ್​ ಜಾಮೀನು ಅರ್ಜಿ ವಜಾಗೊಳಿಸಿತ್ತು. ಅದಾದ ಕೆಲವೇ ನಿಮಿಷಗಳಲ್ಲಿ ಅಲಿ ಖಾನ್​ ಮ್ಯಾಜಿಸ್ಟ್ರೇಟ್​ ಮುಂದೆ ಶರಣಾಗಿದ್ದಾರೆ.

ಸಿಸಿಬಿ ಬಂಧನ ಭೀತಿಯಿಂದ ಕೋರ್ಟ್​ಗೆ ಶರಣಾದ ಅಲಿ ಖಾನ್​ಗೆ ನವೆಂಬರ್​ 27ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶಿಸಿದೆ. ಆಂಬಿಡೆಂಟ್​ ಕಿಕ್​ಬ್ಯಾಕ್​ ಪ್ರಕರಣದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರಾಗಿತ್ತು.

ಆಂಬಿಡೆಂಟ್​ ಕಂಪನಿ ಜೊತೆಗೆ ಜನಾರ್ದನ ರೆಡ್ಡಿ ಡೀಲ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೈಗೆತ್ತಿಕೊಳ್ಳಲಾಗಿತ್ತು. ವಿಚಾರಣೆ ನಡೆಸಿ ಆದೇಶ ಕಾಯ್ದಿರಿಸಿದ್ದ ಸೆಷನ್ಸ್​ ಕೋರ್ಟ್​ನಲ್ಲಿ ನಿನ್ನೆ ವಿಚಾರಣೆ ನಡೆದಿತ್ತು. ಈ ಹಿಂದೆ ನಿರೀಕ್ಷಣಾ ಜಾಮೀನು ಪಡೆದಿದ್ದ ಅಲಿಖಾನ್​ ಅವರ ಜಾಮೀನು ರದ್ದು ಕೋರಿ ಸಿಸಿಬಿ ಅಧಿಕಾರಿಗಳು ಅರ್ಜಿ ಸಲ್ಲಿಸಿದ್ದರು. ಅದರಂತೆ, ಇಂದು ಅಲಿಖಾನ್ ಜಾಮೀನು ಅರ್ಜಿ ವಜಾಗೊಳಿಸಿತ್ತು.

ಜಾಮೀನು ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ಜನಾರ್ದನ ರೆಡ್ಡಿ ಆಪ್ತ ಅಲಿಖಾನ್​ಗೆ ಮತ್ತೆ ಬಂಧನ ಭೀತಿ ಎದುರಾಗಿತ್ತು. ಅಲಿಖಾನ್​ನನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುವ ಸಾಧ್ಯತೆ ಇತ್ತು. ಹೀಗಾಗಿ, ಮ್ಯಾಜಿಸ್ಟ್ರೇಟ್ ಕೋರ್ಟ್​ನಲ್ಲಿ ಅಲಿಖಾನ್ ಶರಣಾಗಿದ್ದಾರೆ.

Comments are closed.