ಕರ್ನಾಟಕ

ರೈತ ಮಹಿಳೆಗೆ ಅವಮಾನ: ಕುಮಾರಸ್ವಾಮಿ ವಿರುದ್ಧ ದೂರು ದಾಖಲು

Pinterest LinkedIn Tumblr


ಬೆಂಗಳೂರು: ರೈತ ಮಹಿಳೆ ಬಗ್ಗೆ ನೀಡಿದ್ಧ ವಿವಾದಾತ್ಮ ಹೇಳಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಈಗ ಕಾನೂನು ಸಂಕಷ್ಟ ಎದುರಾಗಿದ್ದು, ಮಹಿಳೆಗೆ ಅವಮಾನ ಮಾಡಿದ ಆರೋಪದ ಮೇಲೆ ಸಿಎಂ ವಿರುದ್ಧ ದೂರು ದಾಖಲಾಗಿದೆ.
ಬೆಂಗಳೂರು ಮೂಲದ ಕರ್ನಾಟಕ ಕಾರ್ಮಿಕ ಕಲ್ಯಾಣ ಪ್ರತಿಷ್ಠಾನ ಸಿಎಂ ವಿರುದ್ಧ ದೂರು ದಾಖಲಿಸಿದ್ದು, ಮಹಿಳೆಯರ ಗೌರವಕ್ಕೆ ಧಕ್ಕೆ ತಂದ ಆರೋಪದಡಿ ಐಪಿಸಿ ಸೆಕ್ಷನ್ 504 ಹಾಗೂ 509 ಅಡಿ ಕುಮಾರಸ್ವಾಮಿ ವಿರುದ್ಧ ಸೂಕ್ತ ತನಿಖೆ ನಡೆಸಿ, ಕ್ರಮಕೈಗೊಳ್ಳುವಂತೆ ಡಿಜಿ-ಐಜಿಪಿ ನೀಲಮಣಿ ಎನ್. ರಾಜು ಅವರಿಗೆ ಮನವಿ ಮಾಡಲಾಗಿದೆ. ಅಲ್ಲದೆ ಮಾನವ ಹಕ್ಕು ಆಯೋಗಕ್ಕೂ ಸಿಎಂ ವಿರುದ್ಧ ದೂರು ನೀಡಲಾಗಿದೆ.
ಸಿಎಂ ವಿರುದ್ಧ ದೂರು ದಾಖಲಿಸಿಕೊಂಡ ಬಗ್ಗೆ ಡಿಜಿ-ಐಜಿಪಿ ಕಚೇರಿಯಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ.
ಕಬ್ಬಿಗೆ ಬೆಂಬಲ ಬೆಲೆ ನೀಡಬೇಕು ಮತ್ತು ಕಬ್ಬಿನ ಬಾಕಿ ಬಿಲ್ ಪಾವತಿಗೆ ಒತ್ತಾಯಿಸಿ ಕಳೆದ ಭಾನುವಾರ ಬೆಳಗಾವಿಯಲ್ಲಿ ಪ್ರತಿಭಟಿಸುತ್ತಿದ್ದ ರೈತ ಮಹಿಳೆ ಜಯಶ್ರೀ ಅವರಿಗೆ, ನಾಲ್ಕು ವರ್ಷದಿಂದ ಎಲ್ಲಿ ಮಲಗಿದ್ದೆ ತಾಯಿ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದರು

Comments are closed.