ಕರ್ನಾಟಕ

ಹುಟ್ಟೂರು ಮಂಡ್ಯದಲ್ಲಿ ‘ಅಂಬಿ’ ಅಂತಿಮ ನಮನಕ್ಕೆ ಸಿದ್ಧತೆ

Pinterest LinkedIn Tumblr

ಬೆಂಗಳೂರು: ಶನಿವಾರ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ ಕನ್ನಡದ ಹಿರಿಯ ನಟ, ರಾಜಕಾರಣಿ ಅಂಬರೀಶ್ ಅವರ ಪಾರ್ಥೀವ ಶರೀರವನ್ನು ಕಂಠೀರವ ಕ್ರೀಡಾಂಗಣದಿಂದ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಕೊಂಡೊಯ್ದು, ನಂತರ ಅಲ್ಲಿಂದ ಮಂಡ್ಯಕ್ಕೆ ಕೊಂಡೊಯ್ಯಲಾಯಿತು.

ಮಂಡ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಕಲ ಸಿದ್ಧತೆ
ಅಂಬರೀಶ್ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇರಿಸಲು ಮಂಡ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಕಲ ಸಿದ್ದತೆ ನಡೆಸಲಾಗಿದೆ. ಸುಮಾರು 500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಐದು ಜಿಲ್ಲೆಗಳ ಎಸ್‌ಪಿ ಮತ್ತು ಹಿರಿಯ ಪೋಲೀಸರು ಭದ್ರತೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.

ಮಂಡ್ಯದ ಸರ್.ಎಂ.ವಿ. ಕ್ರೀಡಾಂಗಣಗಲ್ಲಿ ಪೊಲೀಸ್ ಬಿಗಿ ಭದ್ರತೆ.
ಸಾರ್ವಜನಿಕರಿಗೆ ಮತ್ತು ಗಣ್ಯರಿಗೆ ಅಂತಿಮ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು, ಮಂಡ್ಯದಲ್ಲಿ ಅಂಬಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಿಎಂ ಕೂಡ ಆಗಮಿಸಲಿದ್ದಾರೆ. ಹೀಗಾಗಿ ಪೊಲೀಸರಿಂದ ಕ್ರೀಡಾಂಗಣದ ಭದ್ರತಾ ತಪಾಸಣೆ ನಡೆಸಲಾಗಿದ್ದು, ಶ್ವಾನದಳ ಮತ್ತು ಬಾಂಬ್ ಶೋಧಕ ತಜ್ಞರ ತಂಡದಿಂದ ಸ್ಥಳ ಪರೀಶೀಲನೆ ನಡೆಸಲಾಗಿದೆ.

ಕ್ರೀಡಾಂಗಣದ ಸುತ್ತ ಬಿಗಿ ಭಾರೀ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ಸುಗಮವಾಗಿ ಅಂತಿಮ ದರ್ಶನಕ್ಕೆ ಅನುವು ಮಾಡಿಕೊಡಲು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಸಿದ್ದತೆ ನಡೆಸಿದೆ. ಕ್ರೀಡಾಂಗಣದ ಸುತ್ತ ಬಿಗಿ ಪೊಲೀಸ್ ಭದ್ರತೆ ಹಾಗೂ ಸ್ಥಳದಲ್ಲಿ ಅರೆಸೇನಾ ಪಡೆಗಳ ನಿಯೋಜಿಸಲಾಗಿದ್ದು, ಕ್ರೀಡಾಂಗಣದತ್ತ ಅಂಬರೀಶ್ ಅಭಿಮಾನಿಗಳು ಧಾವಿಸುತ್ತಿದ್ದಾರೆ.

ಮಂಡ್ಯದಲ್ಲಿ ಅಂಬರೀಶ್ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಬೇಕು ಎಂದು ಮಂಡ್ಯದ ಜನತೆ ಒತ್ತಾಯಿಸಿದ್ದರಿಂದ ಸರಕಾರ ಜನತೆಯ ಒತ್ತಾಯಕ್ಕೆ ಮಣಿದು ಅಲ್ಲಿನ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ವ್ಯವಸ್ಥೆ ಕಲ್ಪಿಸಿದೆ.

ಮಂಡ್ಯದಲ್ಲಿ ಭಾನುವಾರ ಸಂಜೆ 5 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಸಾರ್ವಜನಿಕ ದರ್ಶನಕ್ಕೆ ಅವಕಾಶಕ್ಕೆ ಕಲ್ಪಿಸಲಾಗಿದೆ.
ಸಿಎಂ ಕುಮಾರಸ್ವಾಮಿ ಶನಿವಾರ ರಾತ್ರಿ, ಮಂಡ್ಯದಿಂದ ಅಂಬರೀಶ್ ಅಂತಿಮ ದರ್ಶನಕ್ಕೆ ಆಗಮಿಸುವವರಿಗಾಗಿ ವಿಶೇಷ ಬಸ್‌ಗಳ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಪಾರ್ಥೀವ ಶರೀರವನ್ನು ಮಂಡ್ಯಕ್ಕೆ ಕೊಂಡೊಯ್ದು ವಾಪಸ್‌ ಬೆಂಗಳೂರಿಗೆ ತರುವುದು ಕಷ್ಟವಾಗುತ್ತದೆ. ಹೀಗಾಗಿ ಜನರು ಸಹಕರಿಸಬೇಕು ಎಂದು ಮನವಿ ಮಾಡಿಕೊಂಡಿದ್ದರು.

ಆದರೆ ಮಂಡ್ಯದ ಜನತೆ ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಅಂಬಿ ಅಂತಿಮ ದರ್ಶನಕ್ಕೆ ಮಂಡ್ಯದಲ್ಲೇ ವ್ಯವಸ್ಥೆ ಮಾಡಬೇಕು ಎಂದು ಪ್ರತಿಭಟನೆ ನಡೆಸಿದ್ದರು.

ಹೀಗಾಗಿ ಕೇಂದ್ರ ರಕ್ಷಣಾ ಇಲಾಖೆಯ ಜತೆ ಸಮಾಲೋಚಿಸಿ ಹೆಲಿಕಾಪ್ಟರ್‌ಗೆ ವ್ಯವಸ್ಥೆ ಮಾಡಿ, ಅದರಲ್ಲಿ ಅಂಬರೀಶ್ ಪಾರ್ಥೀವ ಶರೀರವನ್ನು ಎಚ್‌ಎಎಲ್ ವಿಮಾನ ನಿಲ್ದಾಣ ಮೂಲಕ ಮಂಡ್ಯಕ್ಕೆ ಕೊಂಡೊಯ್ಯಲಾಗಿತ್ತು.

Comments are closed.