ಕರ್ನಾಟಕ

ಸೇನಾ ಹೆಲಿಕಾಫ್ಟರ್‌ನಲ್ಲಿ ಮಂಡ್ಯಗೆ ಅಂಬಿ ಪಾರ್ಥಿವ ಶರೀರ!

Pinterest LinkedIn Tumblr


ಬೆಂಗಳೂರು: ಮಂಡ್ಯದ ಗಂಡು ಅಂಬರೀಶ್ ಅವರನ್ನು ಕೊನೆಯ ಬಾರಿಗೆ ಕಾಣಬೇಕೆಂದು ಮಂಡ್ಯ ಜನತೆ ಕಣ್ಣೀರಿಟ್ಟಿದ್ದು ತವರಿಗೆ ಅಂಬಿ ಮೃತ ಶರೀರವನ್ನು ತರುವಂತೆ ಆಗ್ರಹಿಸಿದ್ದರು. ಇದಕ್ಕೆ ಸ್ಪಂಧಿಸಿರುವ ರಾಜ್ಯ ಸರ್ಕಾರ ಸೇನಾ ಹೆಲಿಕಾಫ್ಟರ್‌ ಮೂಲಕ ಮಂಡ್ಯಗೆ ಪಾರ್ಥಿವ ಶರೀರವನ್ನು ರವಾನಿಸಲಿದೆ.
ಏರ್ ಲಿಫ್ಟ್ ಮೂಲಕ ಮಂಡ್ಯಕ್ಕೆ ಅಂಬಿ ಪಾರ್ಥಿವ ಶರೀರ ಕೊಂಡೊಯ್ಯಲು ರಕ್ಷಣಾ ಇಲಾಖೆ ಅನುಮತಿ ನೀಡಿದೆ. ಈ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸೇನಾ ಹೆಲಿಕಾಪ್ಟರ್ ಮೂಲಕ ಅಂಬಿ ಮೃತ ಶರೀರ ರವಾನೆಗೆ ಹೆಲಿಕಾಪ್ಟರ್ ನೀಡುವಂತೆ ರಕ್ಷಣಾ ಸಚಿವೆ ನಿರ್ಮಾಲಾ ಸೀತಾರಾಮನ್ ಅವರಿಗೆ ಮನವಿ ಮಾಡಿದ್ದರು.
ರಾಜ್ಯ ಸರ್ಕಾರಕ್ಕೆ ಸ್ಪಂಧಿಸಿರುವ ನಿರ್ಮಾಲಾ ಸೀತಾರಾಮನ್ ಅವರು ಏಲ್ ಲಿಫ್ಟ್ ಗೆ ಅನುಮತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಡ್ಯಗೆ ಅಂಬಿ ಪಾರ್ಥಿವ ಶರೀರ ರವಾನಿಸಿ ಮಂಡ್ಯದ ವಿಶ್ವೇಶ್ವರಯ್ಯ ಸ್ಟೇಡಿಯಂ ನಲ್ಲಿ ಇಂದು ಸಂಜೆ 4 ಗಂಟೆಯಿಂದ ನಾಳೆ ಬೆಳಗ್ಗೆ 6 ಗಂಟೆಯವರೆಗೆ ಸಾರ್ವಜನಿಕರಿಗಾಗಿ ಅಂತಿಮ ದರ್ಶನಕ್ಕೆ ಇಡಲಾಗುವುದು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

Comments are closed.