ಕರ್ನಾಟಕ

ರಾಜ್ಯದಲ್ಲಿ ಸರ್ಕಾರ ಇದೆಯಾ? ಇರುವುದು ಎಚ್.ಡಿ.ದೇವೇಗೌಡ, ರೇವಣ್ಣ ಸರ್ಕಾರ: ಈಶ್ವರಪ್ಪ ವ್ಯಂಗ್ಯ

Pinterest LinkedIn Tumblr

ಹುಬ್ಬಳ್ಳಿ: ರಾಜ್ಯದಲ್ಲಿ ಸರ್ಕಾರ ಇದೆಯಾ? ಸರ್ಕಾರವೇ ಇಲ್ಲ. ಇದು ಎಚ್.ಡಿ.ದೇವೇಗೌಡ ರೇವಣ್ಣ ಸರ್ಕಾರ ಎಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷ ಅಧಿಕಾರಕ್ಕಾಗಿ ಯಾವುದೇ ಆಪರೇಷನ್ ಕಮಲ ಮಾಡುವುದಿಲ್ಲ. ಸಂಪುಟ ವಿಸ್ತರಣೆಯಾದ ದಿನವೇ ಸರ್ಕಾರ ಪತನವಾಗಲಿದೆ ಎಂದು ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.

ಅಧಿಕಾರಕ್ಕಾಗಿ ಆಸೆ ಪಟ್ಟು ಜೆಡಿಎಸ್ ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದೆ. ಜೆಡಿಎಸ್ ಜತೆ ಸಿದ್ದರಾಮಯ್ಯ ಮೈತ್ರಿಮಾಡಿಕೊಂಡಿರಲಿಲ್ಲ. ಯಾಕೆಂದರೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದುವನ್ನು ಸೋಲಿಸಿದ್ದರು. ಆದರೆ ಕಾಂಗ್ರೆಸ್ ಹೈಕಮಾಂಡ್ ಗೆ ಅಧಿಕಾರ ಬೇಕಾಗಿತ್ತು ಅದಕ್ಕಾಗಿ ಮೈತ್ರಿ ಮಾಡಿಕೊಂಡಿದ್ದಾರೆ ಎಂದರು.

Comments are closed.