ಕರ್ನಾಟಕ

ಇಂದು ಕೇರಳಕ್ಕೆ ಯಡಿಯೂರಪ್ಪ; ವಿಶ್ರಾಂತಿಗೋ? ಆಪರೇಷನ್ ಕಮಲಕ್ಕೋ?

Pinterest LinkedIn Tumblr


ಬೆಂಗಳೂರು: ರಾಜ್ಯದಲಿ ಚಳಿಗಾಲದ ಅಧಿವೇಶನ ಮತ್ತು ಲೋಕಸಭೆ ಚುನಾವಣೆಗೆ ಸಕಲ ಸಿದ್ಧತೆಯಲ್ಲಿ ತೊಡಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪ್ರಚಾರದಲ್ಲಿ ಪಾಲ್ಗೊಳ್ಳುವ ಮುನ್ನ ಅವರು ಆರೋಗ್ಯ ಸುಧಾರಿಸಿಕೊಳ್ಳುವ ಉದ್ದೇಶದಿಂದ ಕೇರಳದಲ್ಲಿ 8 ದಿನಗಳ ಕಾಲ ವಿಶ್ರಾಂತಿ ಪಡೆಯಲು ನಿರ್ಧರಿಸಿದ್ದಾರೆ.

ರಾಜ್ಯ ಪ್ರವಾಸ ಹಾಗೂ ಅಧಿವೇಶನಕ್ಕೂ ಮುನ್ನ ಸದೃಢ ಆರೋಗ್ಯಕ್ಕಾಗಿ ಪ್ರಕೃತಿ ಚಿಕಿತ್ಸೆ ಪಡೆಯಲು ಕೇರಳಕ್ಕೆ ಬಿಎಸ್ ವೈ ಹೋಗಲಿದ್ದು, ಅಲ್ಲಿ 8 ದಿನಗಳ ಕಾಲ ಚಿಕಿತ್ಸೆ ಪಡೆದು, ಡಿಸೆಂಬರ್ 8 ರ ಬಳಿಕ ರಾಜ್ಯಕ್ಕೆ ವಾಪಸ್ಸಾಗಲಿದ್ದಾರೆ. 8 ದಿನಗಳ ಕಾಲ ಕೇರಳದ ಪ್ರಾಕೃತಿಕ ಚಿಕಿತ್ಸಾ ಕೇಂದ್ರದಲ್ಲಿ ಬಿಎಸ್​ವೈ ವಾಸ್ತವ್ಯ ಹೂಡಲಿದ್ದು, ನಾಳೆ(ಡಿಸೆಂಬರ್ 1) ಕೇರಳಕ್ಕೆ ತೆರಳಲಿದ್ದಾರೆ. ಇದೇ ಸಂದರ್ಭದಲ್ಲಿ ಅಲ್ಲಿನ ಕೆಲವು ದೇವಸ್ಥಾನಗಳಿಗೂ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.

ಮತ್ತೊಂದೆಡೆ, ರಾಜ್ಯದಲ್ಲಿ ಭುಗಿಲೆದ್ದಿರುವ ಬಂಡಾಯ ಶಾಸಕರನ್ನು ಸೆಳೆಯಲು ಯಡಿಯೂರಪ್ಪ ಕೇರಳಕ್ಕೆ ತೆರಳುತ್ತಿದ್ದಾರೆ ಎಂಬ ಮಾತೂ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ಕಾಂಗ್ರೆಸ್​ನ ಅತೃಪ್ತ ಶಾಸಕರು ಯಡಿಯೂರಪ್ಪ ಅವರೊಂದಿಗೆ ಸಂಪರ್ಕ ಸಾಧಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

Comments are closed.