ಕರ್ನಾಟಕ

ಸಿದ್ದಗಂಗಾ ಶ್ರೀಗಳು ಆಸ್ಪತ್ರೆಗೆ ದಾಖಲು

Pinterest LinkedIn Tumblr


ಬೆಂಗಳೂರು: ನಡೆದಾಡುವ ದೇವರು ಎಂದೇ ಖ್ಯಾತಿಯನ್ನು ಪಡೆದಿರುವ ತುಮಕೂರಿನ ಸಿದ್ದಗಂಗಾ ಶ್ರೀಗಳು ಮತ್ತೆ ಅನಾರೋಗ್ಯಕ್ಕೆ ಒಳಗಾಗಿದ್ದು, ಅವರನ್ನು ಇಂದು ಬಿಜಿಎಸ್​ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

111 ವರ್ಷದ ಶ್ರೀಗಳು ಸಣ್ಣದಾಗಿ ಜ್ವರವಿದ್ದು ಈ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೇವೇಳೆ ಅವರಿಗೆ ರಕ್ತಪರೀಕ್ಷೆ, ಅಲ್ಟ್ರಾಸೌಂಡ್ ಮತ್ತು ಕಿಬ್ಬೊಟ್ಟೆಯ ಸಿಟಿ ಸ್ಕ್ಯಾನ್ ಮಾಡಲಾಗುವುದು ಎಂದು ಆಸ್ಪತ್ರೆ ಪ್ರಕಟಣೆಯನ್ನು ಹೊರಡಿಸಿದೆ.

ಶ್ರೀಗಳ ಜೊತೆ ಕಿರಿಯ ಶ್ರೀ ಸಿದ್ಧಲಿಂಗಸ್ವಾಮೀಜಿ ಹಾಗೂ ಕಣ್ಣೂರು ಸ್ವಾಮೀಜಿ ಆಗಮಿಸಿದ್ದು, ಪೊಲೀಸ್ ಬೆಂಗಾವಲಿನಲ್ಲಿ ಶ್ರೀಗಳನ್ನು ಕೆಂಗೇರಿ ಬಿಜಿಎಸ್ ಆಸ್ಪತ್ರೆಗೆ ಕರೆ ತರಲಾಗಿದೆ. ಈ ವೇಳೆ ಆಸ್ಪತ್ರೆಯ ಒಳಗೆ ತೆರಳಲು ವೀಲ್ಹ್ ಚೇರ್ ನಲ್ಲಿ ಕುಳಿತುಕೊಳ್ಳಲು ನಿರಾಕರಿಸಿ ತಾವೇ ನಡೆದುಕೊಂಡು ಹೋದರು.

ಕಳೆದ ಜೂನ್ ನಲ್ಲಿ 5 ಲಿವರ್​ ಸ್ಟಂಟ್ ಗಳನ್ನು ಅಳವಡಿಸಲಾಗಿತ್ತು. ಬಳಿಕ 3 ಸ್ಟಂಟ್ ಅಳವಡಿಸಲಾಗಿತ್ತು. ಇದರಿಂದ 6 ತಿಂಗಳಿಗೆ ಒಮ್ಮೆ ತಪಾಸಣೆಗೆ ನಡೆಸಲಾಗುತ್ತದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

Comments are closed.