ಕರ್ನಾಟಕ

ಡಿಸೆಂಬರ್ 1, ಅಂಬರೀಶ್ ರವರಿಗೆ ಸಿನಿಮಾ ಎಂಟ್ರಿ ನೀಡಿದ್ದ ಪುಟ್ಟಣ್ಣ ಕಣಗಾಲ್ ಜನ್ಮದಿನ

Pinterest LinkedIn Tumblr


ಬೆಂಗಳೂರು: ಪುಟ್ಟಣ್ಣ ಕಣಗಾಲ್ ಕನ್ನಡ ಚಿತ್ರರಂಗದ ಸೃಜನಶೀಲ ನಿರ್ದೇಶಕರಲ್ಲಿ ಒಬ್ಬರು.ಇಂತಹ ಮಹಾನ್ ನಿರ್ದೇಶನ ಜನ್ಮದಿನವಿಂದು.ಈ ಹಿನ್ನಲೆಯಲ್ಲಿ ನಾವು ಅವರು ಬೆಳೆದು ಬಂದ ಹಾದಿಯನ್ನು ಗಮನಿಸಬೇಕಾಗಿದೆ.ಪುಟ್ಟಣ್ಣ ಕಣಗಾಲ್ ನಿರ್ದೇಶಕರಾಗಿ ಹಿಂದಿ, ಮಲಯಾಳಂ ಭಾಷೆಗಳ ಕೆಲವು ಚಿತ್ರಗಳನ್ನು ಸಹ ನಿರ್ದೇಶಿಸಿ ಅವರು ಸೈ ಅನಿಸಿಕೊಂಡಿದ್ದಾರೆ.ವಿಶೇಷವೆಂದರೆ ಇವರ ಚಿತ್ರಗಳು ಅತ್ಯಂತ ಉತ್ಕೃಷ್ಟ ಮಟ್ಟದ್ದೆಂದು ಹಲವು ಕನ್ನಡಿಗರು ಅಭಿಪ್ರಾಯ ಪಡುತ್ತಾರೆ. ಸಾಮಾನ್ಯವಾಗಿ ಕಲೆ, ಭಾವನಾತ್ಮಕತೆಯಿಂದ ಕೂಡಿದ ಚಿತ್ರಗಳನ್ನು ನಿರ್ದೇಶಿಸುತ್ತಿದ್ದ ಇವರು ಕನ್ನಡ ಚಲನಚಿತ್ರರಂಗಕ್ಕೆ ಹೊಸ ಆಯಾಮ ನೀಡಿದವರು.

ಪುಟ್ಟಣ್ಣರವರು ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕಣಗಾಲ್ ಗ್ರಾಮದಲ್ಲಿ ಡಿಸೆಂಬರ್ 1, 1933 ರಂದು ಜನಿಸಿದರು.ಇವರ ಮೊದಲ ಹೆಸರು “ಶುಬ್ರವೇಷ್ಠಿ ರಾಮಸ್ವಾಮಯ್ಯ ಸೀತಾರಾಮ ಶರ್ಮ” ಮುಂದೆ ಎಸ್‌.ಆರ್‌.ಪುಟ್ಟಣ್ಣ ಕಣಗಾಲ್ ಎಂದು ಹೆಸರಾದರು. ಪುಟ್ಟಣ್ಣರವರು ಚಿತ್ರರಂಗಕ್ಕೆ ಬರುವ ಮುನ್ನ ನಾಟಕ ಕಂಪೆನಿ ಡ್ರೈವರ್ ಆಗಿ ಕಾರ್ಯ ನಿರ್ವಹಿಸಿದ್ದರು. ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ, ನಿರ್ಮಾಪಕರಲ್ಲೊಬ್ಬರಾದ ಬಿ.ಆರ್. ಪಂತುಲು ಅವರ ಬಳಿ 1954 ರಲ್ಲಿ ಡೈಲಾಗ್ ಕೋಚ್ ಆಗಿ ಸೇರಿದ ಪುಟ್ಟಣ್ಣ ನಂತರದ ದಿನಗಳಲ್ಲಿ ” ಪದ್ಮಿನಿ ಪಿಕ್ಚರ್ಸ್”ನ ಸಹಾಯಕ ನಿರ್ದೇಶಕರಾಗಿ ಭಡ್ತಿ ಪಡೆದರು.ಕಾದಂಬರಿ ಆಧಾರಿತ ಚಿತ್ರಗಳಿಗೆ ಹೆಚ್ಚು ಒತ್ತು ಕೊಟ್ಟಿದ್ದರು. ಪುಟ್ಟಣ್ಣನವರ ವೃತ್ತಿ ಜೀವನದ ಮೊದಲ ಚಿತ್ರ ‘ಸ್ಕೂಲ್‍ಮಾಸ್ಟರ್’.

ಪುಟ್ಟಣ್ಣನವರ ಚಿತ್ರಗಳ ಮೂಲಕ ಬೆಳಕಿಗೆ ಬಂದ ನಾಯಕಿ ನಟಿಯರಲ್ಲಿ ಕಲ್ಪನಾ, ಆರತಿ, ಪದ್ಮಾ ವಾಸಂತಿ ಹಾಗೂ ಅಪರ್ಣಾ ಪ್ರಮುಖರು. ಅದೇ ರೀತಿಯಾಗಿ ನಾಯಕ ನಟರಲ್ಲಿ ವಿಷ್ಣುವರ್ಧನ್, ರಾಮಕೃಷ್ಣ, ಜೈಜಗದೀಶ್, ಅಂಬರೀಶ್, ಶ್ರೀನಾಥ್ ಶ್ರೀಧರ್ ಹಲವಾರು ನಟರು ಇವರ ಮೂಲಕ ಬೆಳ್ಳಿ ತೆರೆಗೆ ಎಂಟ್ರಿ ಕೊಟ್ಟರು ಜೂನ್ 5,1985ರಲ್ಲಿ ಮಸಣದ ಹೂವು ಚಿತ್ರ ನಿರ್ಮಿಸುತ್ತಿದ್ದ ವೇಳೆ ಅವರು ನಿಧನರಾದರು.ನಂತರ ಅರ್ಧ ಚಿತ್ರೀಕರಣಗೊಂಡಿದ್ದ ಈ ಚಿತ್ರದ ಉಳಿದ ಭಾಗವನ್ನು ಪುಟ್ಟಣ್ಣನವರ ಶಿಷ್ಯರಾದ ಕೆ.ಎಸ್.ಎಲ್.ಸ್ವಾಮಿಯವರು ಪೂರ್ತಿಗೊಳಿಸಿದರು.

Comments are closed.