ಕರ್ನಾಟಕ

ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿ ಮಠಕ್ಕೆ ಮರಳಿದ ಸಿದ್ದಗಂಗಾ ಶ್ರೀಗಳು

Pinterest LinkedIn Tumblr


ಬೆಂಗಳೂರು: ಅನಾರೋಗ್ಯ ಸಮಸ್ಯೆಯಿಂದ ಕಳೆದ ಮೂರು ದಿನಗಳಿಂದ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದ ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ(111) ಸೋಮವಾರ ಡಿಸ್ಚಾರ್ಜ್ ಆಗಿ ಮಠಕ್ಕೆ ಮರಳಿದ್ದಾರೆ.

ಜ್ವರ, ರಕ್ತದಲ್ಲಿನ ಸೋಂಕು, ಪಿತ್ತನಾಳದ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳು ಮಠಕ್ಕೆ ಮರಳಲೇಬೇಕೆಂದು ಹಠಕ್ಕೆ ಬಿದ್ದಿದ್ದರು ಹೀಗಾಗಿ ಡಿಸ್ಚಾರ್ಜ್‌ ಮಾಡಲಾಗುತ್ತಿದೆ. ಆದರೆ ಮುಂದಿನ 5 ದಿನಗಳ ಕಾಲ ಮಠದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.

ಸ್ವಾಮೀಜಿಗೆ ಚಿಕಿತ್ಸೆ ನೀಡಿದ ಡಾ. ರವೀಂದ್ರ ಮಾತನಾಡಿ, ಶ್ರೀಗಳಿಗೆ ಪಿತ್ತಕೋಶ, ಮೂತ್ರನಾಳದಲ್ಲಿ ಸೋಂಕು ಉಂಟಾಗಿತ್ತು. ನಿನ್ನೆಯಷ್ಟೇ ಅವರಿಗೆ ಎಂಡೋಸ್ಕೋಪ್ ಮಾಡುವ ಮೂಲಕ ಸ್ಟಂಟ್ ಅಳವಡಿಸಿದ್ದೇವೆ. ಈಗ ಸೋಂಕು ಕಡಿಮೆಯಾಗಿದೆ. ಒಂದು ವಾರ ಕಾಲ ಅವರು ವಿಶ್ರಾಂತಿಯಲ್ಲಿರಬೇಕು. ಶ್ರೀಗಳ ಆಚಾರ ವಿಚಾರಕ್ಕೆ ತೊಂದರೆಯಾಗದಂತೆ ಚಿಕಿತ್ಸೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

Comments are closed.