ಕರ್ನಾಟಕ

ಮೇಕೆದಾಟು ಯೋಜನೆಗೆ ಅಡ್ಡಿಯಾಗಬೇಡಿ ಎಂದು ತಮಿಳುನಾಡಿಗೆ ಕೈಮುಗಿದು ಮನವಿ ಮಾಡಿದ ಡಿಕೆಶಿ

Pinterest LinkedIn Tumblr


ಬೆಂಗಳೂರು: ಮೇಕೆದಾಟು ಯೋಜನೆ ಸಂಬಂಧ ಕೇಂದ್ರ ಜಲ ಆಯೋಗ ಸಮಗ್ರ ವರದಿ ಕೇಳಿದ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ಅಧಿಕಾರಿಗಳ ಜೊತೆ ಮೇಕೆದಾಟು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಂಗಮದಲ್ಲಿ ಮಾತನಾಡಿದ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್, ಅಣೆಕಟ್ಟು ನಿರ್ಮಾಣದಿಂದ 4,980 ಹೆಕ್ಟೇರ್ ಪ್ರದೇಶ ಮುಳುಗಡೆಯಾಗಲಿದೆ. ಇದರಲ್ಲಿ 4,700 ಹೆಕ್ಟೇರ್ ಅರಣ್ಯ ಪ್ರದೇಶ ಹಾಗೂ 280 ಹೆಕ್ಟೇರ್ ರೆವೆನ್ಯೂ ಭೂಮಿಯಾಗಿದೆ. ಮೂರ್ನಾಲ್ಕು ಹಳ್ಳಿಗಳು ಮುಳುಗಡೆ ಆಗಲಿದೆ. ಕಾನೂನಿನ ಚೌಕಟ್ಟಿನಲ್ಲಿ ಅಣೆಕಟ್ಟು ನಿರ್ಮಾಣ ಮಾಡುತ್ತೇವೆ ಎಂದರು.

ಇದೇ ವೇಳೆ ತಮಿಳುನಾಡಿನ ಅಧಿಕಾರಿಗಳೇ ಸ್ಥಳ ವೀಕ್ಷಣೆ ಮಾಡಲಿ ಎಂದ ಸಚಿವರು, ತಮಿಳುನಾಡಿಗೆ ಕೈಮುಗಿದು ಮನವಿ ಮಾಡುತ್ತೇವೆ. ಈ ಯೋಜನೆಗೆ ಅಡ್ಡಿಯಾಗಬೇಡಿ ಎಂದು ಮನವಿ ಮಾಡಿದರು.

ಇತ್ತ ತಮಿಳುನಾಡು ಬೆನ್ನಲ್ಲೇ ಮೇಕೆದಾಟು ಯೋಜನೆಗೆ ಪುದುಚೇರಿ ಕೂಡ ಕ್ಯಾತೆ ತೆಗೆದಿದ್ದು, ಮೇಕೆದಾಟು ಯೋಜನೆಗೆ ಅನುಮತಿ ನೀಡದಂತೆ ಪುದುಚೇರಿಯಲ್ಲಿರುವ ಕಾಂಗ್ರೆಸ್ ಸರ್ಕಾರವೂ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದೆ. ಅಲ್ಲದೇ ಕೇಂದ್ರ ಜಲ ಆಯೋಗ ನೀಡಿರುವ ಅನುಮತಿ ವಾಪಸ್ ಪಡೆಯುವಂತೆ ಸೂಚಿಸಲು ಮನವಿ ಮಾಡಿದೆ. ಇದರ ನಡುವೆ ಮಹದಾಯಿ ನದಿ ನೀರು ವಿವಾದ ಸಂಬಂಧ ಗೋವಾ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ.

Comments are closed.