ಬೆಂಗಳೂರು: ಮದ್ಯ ಸೇವನೆಗೆ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಮಗ ಹೆತ್ತ ತಾಯಿಗೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಅಮಾನವೀಯ ಘಟನೆ ಅಶ್ವತ್ಥನಗರದಲ್ಲಿ ನಡೆದಿದೆ.
ಆರೋಪಿ ಉತ್ತಮ್ಕುಮಾರ್ (23) ಇಂಥ ಕ್ರೂರ ಕೃತ್ಯ ಎಸಗಿದ್ದಾನೆ. ಮದ್ಯಸೇವನೆಗೆ ತಾಯಿ ಭಾರತಿಯವರ ಬಳಿ ಹಣ ಕೇಳಿದ್ದಾನೆ. ಆದರೆ ಅವರು ಕೊಡಲು ನಿರಾಕರಿಸಿದ್ದಾರೆ. ಇಷ್ಟಕ್ಕೇ ಆಕ್ರೋಶಗೊಂಡ ಕ್ರೂರಿ ಮಗ ಪೆಟ್ರೋಲ್ ಸುರಿದು ಬೆಂಕಿಯಿಟ್ಟಿದ್ದಾನೆ. ಉರಿ ತಾಳಲಾರದೆ ಭಾರತಿಯವರು ಕೂಗಾಡಲು ಪ್ರಾರಂಭಿಸಿದಾಗ ಅವರ ಪತಿ ಆಗಮಿಸಿ ಬೆಡ್ಶೀಟ್ನಿಂದ ಬೆಂಕಿ ಆರಿಸಿದ್ದಾರೆ. ಹಾಗೇ ಹೊಯ್ಸಳ ಪೊಲೀಸರಿಗೆ ಕರೆ ಮಾಡಿದ್ದಾರೆ. ಆದರೆ ಅಷ್ಟರಲ್ಲಾಗಲೇ ಮಗ ಪರಾರಿಯಾಗಿದ್ದ ಎನ್ನಲಾಗಿದೆ.
ಭಾರತಿಯವರಿಗೆ ಹೊಟ್ಟೆ, ಎದೆ ಭಾಗಗಳಲ್ಲಿ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.