ಕರ್ನಾಟಕ

ಬಾಗಲಕೋಟೆ: ಡಿಸ್ಟಿಲರಿ ಸಂಸ್ಕರಣಾ ಘಟಕದಲ್ಲಿ ಸ್ಪೋಟ ಸಂಭವಿಸಿದ ಪರಿಣಾಮ ನಾಲ್ವರ ಸಾವು, ಐವರಿಗೆ ಗಾಯ

Pinterest LinkedIn Tumblr

ಬಾಗಲಕೋಟೆ: ಡಿಸ್ಟಿಲರಿ ಸಂಸ್ಕರಣಾ ಘಟಕದಲ್ಲಿ ಸ್ಪೋಟ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿ ಐದು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಕುಳಲಿ ಗ್ರಾಮದಲ್ಲಿ ಸಂಭವಿಸಿದೆ.

ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಮುರುಗೇಶ್ ನಿರಾಣಿ ಒಡೆತನದ ಈ ಡಿಸ್ಟಿಲರಿ ಘಟಕದಲ್ಲಿ ಸ್ಪೋಟ ಸಂಭವಿಸಿದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಪೋಟದ ತೀವ್ರತೆಗೆ ಐದು ಕಾರ್ಮಿಕರು ಗಾಯಗೊಂಡಿದ್ದು ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ, ಮುಧೋಳ ಪೊಲೀಸ್ ಠಾಣೆಯಲ್ಲ್ ಪ್ರಕರಣ ದಾಖಲಾಗಿದೆ.

ಸಣ್ಣ ಪ್ರಮಾಣದಲ್ಲಿ ಸ್ಪೋಟ ಸಂಭವಿಸಿದ್ದು, ಘಟನೆಗೆ ಕಾರಣ ಏನು ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಕಾರ್ಖಾನೆ ಮಾಲೀಕ ಮುರುಗೇಶ್ ನಿರಾಣಿ ಹೇಳಿದ್ದಾರೆ. ಇನ್ನೂ ಘಟಕದಲ್ಲಿದ್ದ ಸೇಫ್ಟಿವಾಲ್ ಕೆಲಸ ಮಾಡದ ಕಾರಣ ಸ್ಪೋಟ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

Comments are closed.