ಕರ್ನಾಟಕ

ವಿಷಪೂರಿತ ಪ್ರಸಾದ ದುರಂತ: ಮೃತರ ಸಂಖ್ಯೆ 14ಕ್ಕೆ ಏರಿಕೆ

Pinterest LinkedIn Tumblr


ಮೈಸೂರು: ಚಾಮರಾಜನಗರ ಜಿಲ್ಲೆಯ ಸುಲ್ವಾಡಿ ಗ್ರಾಮದ ಕಿಚ್‌ಕುತ್‌ ಮಾರಮ್ಮನ ದೇವಸ್ಥಾನದ ವಿಷಬೆರಕೆ ಪ್ರಸಾದ ಸೇವಿಸಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.

ಸುಳ್ವಾಡಿ ಮಾರಮ್ಮ ದೇವಾಲಯದಲ್ಲಿ ಪ್ರಸಾದ ಸೇವಿಸಿ ಅಸ್ವಸ್ಥರಾಗಿ ಮೈಸೂರಿನ ಆಸ್ಪತ್ರೆಗೆ ದಾಖಲಾಗಿದ್ದವರ ಪೈಕಿ ಜೆಎಸ್ಎಸ್ ಆಸ್ಪತ್ರೆಯ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೈಲಿ ಬಾಯಿ (37) ಎಂಬ ಮಹಿಳೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹೀಗಾಗಿ ಮೃತರ ಸಂಖ್ಯೆ 14ಕ್ಕೆ ಏರಿದೆ.

ಸುಳ್ವಾಡಿ ಗ್ರಾಮದ ಕಿಚ್‌ಕುತ್‌ ಮಾರಮ್ಮನ ದೇವಾಲಯದ ಗೋಪುರ ನಿರ್ಮಾಣ ಹಾಗೂ ಸುತ್ತುಗೋಡೆ ನಿರ್ಮಾಣಕ್ಕೆ ಶುಕ್ರವಾರ ನಡೆದ ಭೂಮಿಪೂಜೆ ಕಾರ್ಯಕ್ರಮದ ಬಳಿಕ ಭಕ್ತಾದಿಗಳಿಗೆ ಹಂಚಿದ ಪ್ರಸಾದದಲ್ಲಿ ದುಷ್ಕರ್ಮಿಗಳು ವಿಷ ಬೆರೆಸಿದ ಕಾರಣ, ಪ್ರಸಾದ ಸೇವಿಸಿದ 90ಕ್ಕೂ ಹೆಚ್ಚು ಮಂದಿ ತೀವ್ರ ಅಸ್ವಸ್ಥರಾಗಿದ್ದರಲ್ಲದೆ, 11 ಮಂದಿ ಮೃತಪಟ್ಟಿದ್ದರು.

ಅಲ್ಲದೆ, ನೂತನ ಗೋಪುರ ಹಾಗೂ ಸುತ್ತುಗೋಡೆ ನಿರ್ಮಾಣ ವಿಚಾರದಲ್ಲಿ ಗ್ರಾಮದ ಎರಡು ಗುಂಪುಗಳ ನಡುವೆಯೇ ವೈಮನಸ್ಸಿತ್ತು ಎನ್ನಲಾಗಿದೆ. ಈ ವೈಷಮ್ಯವೇ ಆಹಾರದಲ್ಲಿ ವಿಷ ಬೆರೆಸಲು ಕಾರಣವಾಗಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ಶಂಕೆ ವ್ಯಕ್ತಪಡಿಸಿತ್ತು. ಪೊಲೀಸರು ಈ ಸಂಬಂಧ ತನಿಖೆ ಆರಂಭಿಸಿದ್ದು ಹಲವರನ್ನು ಬಂಧಿಸಿದ್ದಾರೆ.

ಮೃತ ಕುಟುಂಬಗಳಿಗೆ ಸರ್ಕಾರ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದು, ಅಸ್ವಸ್ಥರಾಗಿರುವವರ ಆಸ್ಪತ್ರೆ ವೆಚ್ಚವನ್ನೂ ಸರ್ಕಾರವೇ ಭರಿಸುವುದಾಗಿ ಹೇಳಿದೆ.

Comments are closed.