ಕರ್ನಾಟಕ

ಹಾವೇರಿ ಬ್ಯಾಡಗಿ ಪೊಲೀಸ್ ಇನ್ಸ್ ಪೆಕ್ಟರ್’ನಿಂದ ಮಹಿಳೆಗೆ ಲೈಂಗಿಕ ಕಿರುಕುಳ; ಪೊಲೀಸ್ ಠಾಣೆಗೆ ನುಗ್ಗಿ ಧರ್ಮದೇಟು ನೀಡಿದ ಸಾರ್ವಜನಿಕರು

Pinterest LinkedIn Tumblr

ಹಾವೇರಿ: ಮಹಿಳೆಯರನ್ನು ಕಾಮಾಂಧರಿಂದ ರಕ್ಷಿಸಬೇಕಾದ ಪೊಲೀಸ್ ಅಧಿಕಾರಿಯೇ ಲೈಂಗಿಕ ಕಿರುಕುಳ ನೀಡಿ ಸಾರ್ವಜನಿಕರಿಂದ ಧರ್ಮದೇಟು ನೀಡಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ನಡೆದಿದೆ.

ಬ್ಯಾಡಗಿ ತಾಲೂಕು ಪಂಚಾಯ್ತಿ ಕಚೇರಿ ಎದುರು ಈ ಘಟನೆ ನಡೆದಿದ್ದು, ಸಾರ್ವಜನಿಕರು ಬ್ಯಾಡಗಿ ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸ್ ಇನ್ಸ್ ಪೆಕ್ಟರ್ ನ್ನು ಎಳೆದೊಯ್ದು ಹಿಗ್ಗಾ ಮುಗ್ಗಾ ಥಳಿಸಿದ್ದಾರೆ. ಮಹಿಳೆಯೊಬ್ಬರು ತಮ್ಮ ಮೇಲೆ ಹಲ್ಲೆ ನಡೆಸುತ್ತಿದ್ದ ಸಂಬಂಧಿಕರ ಮೇಲೆ ದೂರು ನೀಡಲು ಪೊಲೀಸ್ ಠಾಣೆಗೆ ಮಹಿಳೆ ಆಗಮಿಸಿದ್ದರು. ಆದರೆ ದೂರು ನೀಡಲು ಬಂದಿದ್ದ ಮಹಿಳೆಯನ್ನೇ ಪೊಲೀಸ್ ಇನ್ಸ್ ಪೆಕ್ಟರ್ ಮಂಚಕ್ಕೆ ಕರೆದಿದ್ದಾನೆ. ಇದರಿಂದ ಕೋಪಗೊಂಡ ಮಹಿಳೆ ಗ್ರಾಮಸ್ಥರೊಂದಿಗೆ ಬ್ಯಾಡಗಿಗೆ ಆಗಮಿಸಿ ಪೊಲೀಸ್ ಅಧಿಕಾರಿ ವಿರುದ್ಧವೇ ಹಿರಿಯ ಅಧಿಕಾರಿಗಳಿಗೆ ದೂರು ನೀಡಲು ಮುಂದಾಗಿದ್ದಾರೆ. ಈ ವೇಳೆ ಗ್ರಾಮಸ್ಥರು ಇನ್ಸ್ ಪೆಕ್ಟರ್ ನ ಸಮವಸ್ತ್ರ ಎಳೆದು ಹಿಗ್ಗಾ ಮುಗ್ಗಾ ಥಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಡಿಎಸ್ ಪಿ ಎಲ್ ಕುಮಾರಪ್ಪಾ ಗ್ರಾಮಸ್ಥರನ್ನು ಸಮಾಧಾನಪಡಿಸಿದ್ದಾರೆ.

ಮಹಿಳೆ ನೀಡಿರುವ ದೂರು ಹಾಗೂ ಪೊಲೀಸ್ ಅಧಿಕಾರಿ ನೀಡಿರುವ ದೂರನ್ನು ದಾಖಲಿಸಿಕೊಳ್ಳಲಾಗಿದ್ದು ತನಿಖೆ ನಡೆಸುತ್ತಿರುವುದಾಗಿ ಹೆಚ್ಚುವರಿ ಎಸ್ ಪಿ ಜಿಎ ಜಗದೀಶ್ ಹೇಳಿದ್ದಾರೆ.

Comments are closed.