ಕರ್ನಾಟಕ

ಸಂಪುಟ ವಿಸ್ತರಣೆಗೂ ಮುನ್ನ ಜಾರಕಿಹೊಳಿ ಮತ್ತು ಹೆಬ್ಬಾಳ್ಕರ್‌ಗೆ ಕರೆ!

Pinterest LinkedIn Tumblr


ಬೆಳಗಾವಿ: ಲಕ್ಷ್ಮಿ ಹೆಬ್ಬಾಳ್ಕರ್- ರಮೇಶ್ ಜಾರಕಿಹೊಳಿ ನಡುವೆ ಶೀತಲ ಸಮರ ದೆಹಲಿ ಅಂಗಳ ತಲುಪಿದೆ. ಇಬ್ಬರ ನಾಯಕರಿಂದ ಪಕ್ಷಕ್ಕೆ- ಮೈತ್ರಿ ಸರ್ಕಾರಕ್ಕೆ ಡ್ಯಾಮೇಜ್ ಆಗುತ್ತಿದೆ ಎನ್ನುವ ವಿಚಾರವನ್ನು ಸಹ ಅಷ್ಟೆ ಗಂಭೀರವಾಗಿ ತೆಗೆದುಕೊಳ್ಳಲಾಗುತ್ತಿದೆ.

ರಮೇಶ್ ಜಾರಕಿಹೊಳಿಗೆ ಹೈಕಮಾಂಡ್ ಈಗಾಗಲೇ ಬುಲಾವ್ ನೀಡಿದೆ. ಇದೀಗ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೂ ದೆಹಲಿಗೆ ಬರುವಂತೆ ತಿಳಿಸಲಾಗಿದೆ. ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಜೊತೆ ಮಾತುಕತೆ ನಡೆಸಲು ದೆಹಲಿಗೆ ಲಕ್ಷ್ಮೀ ಹೆಬ್ಬಾಳ್ಕರ್ ದೆಹಲಿಗೆ ತೆರಳುತ್ತಿದ್ದಾರೆ.

ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದರೂ ಇಬ್ಬರು ನಾಯಕರ ನಡುವಿನ ಮನಸ್ಥಾಪ ಮಾತ್ರ ಮರೆಯಾಗಿಲ್ಲ. ಈ ಹಿಂದೆ ಪಿಎಲ್ ಡಿ ಬ್ಯಾಂಕ್ ಚುನಾವಣೆ ವೇಳೆ ಇಬ್ಬರ ನಡುವಿನ ಶೀತಲ ಸಮರ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಮಾಡಿತ್ತು.

Comments are closed.