ಕರ್ನಾಟಕ

ರಮೇಶ್ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡದಂತೆ ಮನವೊಲಿಸಲು ಕಾಂಗ್ರೆಸ್ ಸರ್ಕಸ್ !

Pinterest LinkedIn Tumblr

ಬೆಳಗಾವಿ: ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಲು ನಿರ್ಧರಿಸಿರುವ ರಮೇಶ್ ಜಾರಕಿಹೊಳಿ, ಆತುರದ ನಿರ್ಧಾರ ಕೈಗೊಳ್ಳದಂತೆ ರಮೇಶ್ ಜಾರಕಿಹೊಳಿ ಮನವೊಲಿಸಲು ಪಕ್ಷದ ಹಿರಿಯ ನಾಯಕರು ಯತ್ನಿಸುತ್ತಿದ್ದಾರೆ.

ಅಸಮಾಧಾನಗೊಂಡ ನಾಯಕರನ್ನು ಮನವೊಲಿಸಲು ಸೋಮವಾರ ರಾಜ್ಯ ಕಾಂಗ್ರೆಸ್ ನಾಯಕರು ಪ್ರಯತ್ನ ನಡೆಸುತ್ತಿದ್ದಾರೆ. ರಮೇಶ್ ಜಾರಕಿಹೊಳಿ ಎಲ್ಲಾ ಬಂಡಾಯ ಶಾಸಕರ ಜೊತೆ ಬೆಂಗಳೂರಿನಲ್ಲಿ ಸಭೆ ನಡೆಸಲಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ, ಸಭೆಯಲ್ಲಿ ಎಲ್ಲಾ ಅತೃಪ್ತರು ಸಾಮೂಹಿಕ ರಾಜೀನಾಮೆ ನೀಡುವ ಸಂಬಂಧ ಚರ್ಚಿಸಲಿದ್ದು ರಮೇಶ್ ಜಾರಕಿಹೊಳಿ ಅಂತಿಮ ನಿರ್ಧಾರ ಕೈಗೊಳ್ಳಲಾಗಿದ್ದಾರೆ.

ಕಾಂಗ್ರೆಸ್ ಅತೃಪ್ತ ಶಾಸಕರಿಗೆ ಹಲವು ಅಫರ್ ಗಳನ್ನು ಬಿಜೆಪಿ ನೀಡುತ್ತಿದೆ,. ಕಳೆದ ಮೂರು ತಿಂಗಳಿಂದ ಕೆಲವು ಶಾಸಕರು ಬಿಜೆಪಿ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಪಕ್ಷಕ್ಕೆ ರಾಜಿನಾಮೆ ನೀಡುವ ಸಂಬಂಧ ಮಾತುಕತೆ ನಡೆಸಿದ್ದಾರೆ, ಬಂಡಾಯ ಶಾಸಕರು ಗುಂಪು ಇಂದು ನಿರ್ಣಾಯದವಾದ ನಿರ್ಧಾರ ಕೈಗೊಳ್ಳಲಿದೆ ಎಂದು ಕಾಂಗ್ರೆಸ್ ನಾಯಕರೊಬ್ಬರು ತಿಳಿಸಿದ್ದಾರೆ.

ರಮೇಶ್ ಜಾರಕಿಹೊಳಿ ಅವರನ್ನು ಹೊರತು ಪಡಿಸಿ ಹಲವು ಬಂಡಾಯ ಶಾಸಕರನ್ನು ಮನವೊಲಿಸುವಲ್ಲಿ ಕಾಂಗ್ರೆಸ್ ನಾಯಕರು ಯಶಸ್ವಿಯಾಗಿದ್ದು, ಅವರೆಲ್ಲಾ ರಾಜೀನಾಮೆ ನೀಡದಿರಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ಪಡೆಯಲು ಜಾರಕಿಹೊಳಿ ಸೇರಿದಂತೆ ಹಲವು ಬಂಡಾಯ ಶಾಸಕರನ್ನು ಸಂಪರ್ಕಿಸಲು ಪ್ರಯತ್ನಿಸಲಾಯಿತು, ಆದರೆ ಯಾರೋಬ್ಬರು ಫೋನ್ ಕರೆ ಸ್ವೀಕರಿಸಲಿಲ್ಲ.

ತಮಗೆ ಸ್ಥಾನ ನೀಡಲು ಹೈಕಮಾಂಡ್ ನಿರಾಕರಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕರು ಬೇಸರಗೊಂಡಿದ್ದಾರೆ, ಅವರು ರಾಜಿನಾಮೆ ನೀಡದಂತೆ ತಡೆಯಲು ಅನೇಕ ಪ್ರಯತ್ನಗಳು ನಡೆಯುತ್ತಿವೆ, ಸೊಮವಾರ ಬೆಳಗ್ಗೆ ವರೆಗೂ ಹಲವು ಹಿರಿಯ ಕಾಂಗ್ರೆಸ್ ನಾಯಕರು ಬಂಡಾಯ ಶಾಸಕರ ಜೊತೆ ಸಂಪರ್ಕದಲ್ಲಿದ್ದರು ಎಂದು ಹೇಳಲಾಗಿದೆ.

Comments are closed.