ಕರ್ನಾಟಕ

ನಾನು ಕನ್ನಡದಲ್ಲಿಯೇ ಓದಿದ್ದು; ನಾನೇನು ಪೆದ್ದನಾ? ಸಿದ್ದರಾಮಯ್ಯ ಪ್ರಶ್ನೆ!

Pinterest LinkedIn Tumblr


ಬೆಂಗಳೂರು: ಕರ್ನಾಟಕದಲ್ಲಿ ಸಾವಿರ ಇಂಗ್ಲೀಷ್​ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸುತ್ತೇನೆ ಎಂದು ಸಿಎಂ ಕುಮಾರಸ್ವಾಮಿಯವರು ಭರವಸೆ ನೀಡಿದ್ಧಾರೆ. ಈ ಬೆನ್ನಲ್ಲೇ ಇದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯನವರು ವಿರೋಧ ವ್ಯಕ್ತಪಡಿಸಿದಂತೆ ಕಾಣುತ್ತಿದೆ. ‘ಕನ್ನಡ ಭಾಷೆ ಕಲಿಕೆ ಮತ್ತು ಕನ್ನಡ ಮಾಧ್ಯಮದ ಬಗ್ಗೆ ನಮಗೆ ಸ್ಪಷ್ಟತೆ ಇರಬೇಕು. ನಾನು ಹೈಸ್ಕೂಲ್​​ವರೆಗೆ ಕನ್ನಡ ಮಾಧ್ಯಮದಲ್ಲಿಯೇ ಕಲಿತವನು. ನಾನೇನು ಪೆದ್ದನಾ? ಎಂದು ಟ್ವೀಟ್​​ ಮಾಡುವ ಮೂಲಕ ಸಿದ್ದರಾಮಯ್ಯನವರು ಪ್ರಶ್ನಿಸಿದ್ದಾರೆ ಎನ್ನಲಾಗಿದೆ.

ಕನ್ನಡ ಭಾಷೆ ಕಲಿಕೆ ಮತ್ತು ಕನ್ನಡ ಮಾಧ್ಯಮದ ಬಗ್ಗೆ ನಮಗೆ ಸ್ಪಷ್ಟತೆ ಇರಬೇಕು.‌ನಾನು ಹೈಸ್ಕೂಲ್ ವರೆಗೆ ಕನ್ನಡ ಮಾಧ್ಯಮದಲ್ಲಿಯೇ ಕಲಿತವನು. ನಾನೇನು ಪೆದ್ದನಾ? ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯಾಗಿ ಉಳಿಯಬೇಕು.

ಇನ್ನು ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಇಲ್ಲಿ ಭಾಷೆಯಾಗಿ ಕನ್ನಡವೇ ಉಳಿಯಬೇಕು ಎಂದಿದ್ಧಾರೆ ಕಾಂಗ್ರೆಸ್​​-ಜೆಡಿಎಸ್​​ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ. ಈ ಮೂಲಕ ಮುಂದಿನ ಶೈಕ್ಷಣಿಕ ವರ್ಷದಿಂದ ಒಂದು ಸಾವಿರ ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ಆರಂಭಿಸಲಾಗುವುದು ಎಂಬ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಹಾಗೆಯೇ ಎನ್ನೊಂದು ಟ್ವೀಟ್​​ನಲ್ಲಿ ಸಿಎಂ ಕುಮಾರಸ್ವಾಮಿಯವರು ಸಾವಿರ ಇಂಗ್ಲೀಷ್​​ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸಿವುದಾಗಿ ಹೇಳಿದ್ದಾರೆ. ಹೀಗಾಗಿ ಈ ಬಗ್ಗೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಲಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

ರಾಜ್ಯದಲ್ಲಿ‌ ಮುಂದಿನ ಶೈಕ್ಷಣಿಕ ವರ್ಷದಿಂದ ೧೦೦೦ ಇಂಗ್ಲೀಷ್ ಮಾಧ್ಯಮ ಶಾಲೆಗಳನ್ನು‌ ಪ್ರಾರಂಭಿಸುವುದಾಗಿ‌ ಮುಖ್ಯಮಂತ್ರಿ‌ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಅವರೊಡನೆ ಚರ್ಚೆ ಮಾಡುತ್ತೇನೆ.

Comments are closed.