ಕರ್ನಾಟಕ

ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಮತ್ತೆ ಏರುಪೇರು; ಆಸ್ಪತ್ರೆಯಲ್ಲಿ ಚಿಕಿತ್ಸೆ

Pinterest LinkedIn Tumblr


ತುಮಕೂರು: ನಡೆದಾಡುವ ದೇವರು ಎಂದೇ ಹೆಸರಾಗಿರುವ ತುಮಕೂರು ಶ್ರೀ ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯದಲ್ಲಿ ಮೆತ್ತ ಏರುಪೇರು ಕಂಡುಬಂದಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಶುಕ್ರವಾರ ಉಸಿರಾಟದ ಸಮಸ್ಯೆ ಎದುರಾದ ಕಾರಣ, ತುಮಕೂರಿನ ಸಿದ್ದಗಂಗಾ ಮಠದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೃತಕ ಉಸಿರಾಟದ ವ್ಯವಸ್ಥೆ ಅಳವಡಿಸಲಾಗಿದೆ. ಅಲ್ಲದೆ, ಮೂಗಿನ ಮೂಲಕ ಗ್ಲೂಕೋಸ್ ನೀಡಲಾಗುತ್ತಿದೆ ಎನ್ನಲಾಗಿದೆ.

ಕೆಲ ದಿನಗಳ ಹಿಂದಷ್ಟೇ ಚೆನ್ನೈನ ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ಶ್ರ್ರಿಗಳಿಗೆ ಹಲವು ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಈಗ ಮತ್ತೆ ಅವರ ಆರೋಗ್ಯದಲ್ಲಿ ವ್ಯತ್ಯಯ ಆಗಿರುವುದರಿಂದ, ಚಿಕಿತ್ಸೆಗೆ ಬೆಂಗಳೂರಿಗೆ ಕರೆತರಬೇಕೆಂದು ವೈದ್ಯರು ಚಿಂತನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Comments are closed.