ಕರ್ನಾಟಕ

ಭಾರತ್ ಬಂದ್‌ ಹಿನ್ನೆಲೆ ವಿವಿ ಮತ್ತು ಪಿಯು ಪೂರ್ವ ಸಿದ್ಧತಾ ಪರೀಕ್ಷೆಗಳು ಮುಂದೂಡಿಕೆ!

Pinterest LinkedIn Tumblr


ಬೆಂಗಳೂರು: ಸಾರಿಗೆ ರಂಗವನ್ನು ಕಾರ್ಪೊರೇಟ್‌ಗೆ ಪರಭಾರೆ ಮಾಡುವ ‘ಮೋಟಾರು ವಾಹನ (ತಿದ್ದುಪಡಿ) ಮಸೂದೆ-2017’ ಅನ್ನು ವಿರೋಧಿಸಿ ಕರೆ ನೀಡಲಾಗಿರುವ ಬಂದ್‌ ಹಿನ್ನೆಲೆಯಲ್ಲಿ ಹಲವು ವಿಶ್ವವಿದ್ಯಾಲಯಗಳು ಪರೀಕ್ಷೆಯನ್ನು ಮುಂದೂಡುವ ನಿರ್ಧಾರ ಕೈಗೊಂಡಿದೆ.

ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಸರಕಾರದ ವಿರುದ್ಧ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಜ.8 ಮತ್ತು 9ರಂದು ಕರೆ ನೀಡಿರುವ ಭಾರತ್‌ ಬಂದ್‌ ಕರೆ ನೀಡಿದೆ. ಇದರಿಂದಾಗಿ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ.

ಈ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಬೆಂಗಳೂರು ವಿಶ್ವವಿದ್ಯಾಲಯದ ಸೆಮಿಸ್ಟರ್‌ ಪರೀಕ್ಷೆಗಳನ್ನು ಮುಂದೂಡಿ ಆದೇಶ ಹೊರಡಿಸಿದೆ.

ಈ ಕುರಿತು ಪತ್ರಿಕಾ ಪ್ರಕಟಣೆಯನ್ನೂ ಹೊರಡಲಾಗಿದೆ.

ಪಿಯು ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಬೆಂಗಳೂರು ವಿವಿ ಪ್ರಕಟಣೆ

ವಿಟಿಯು ಕೂಡ 8 ಮತ್ತು 9ನೇ ದಿನಾಂಕದಂದು ನಡೆಯಬೇಕಾಗಿದ್ದ ಪರೀಕ್ಷೆಗಳನ್ನು ಮುಂದೂಡಿದೆ. ವಿಟಿಯು ಕುಲಪತಿ ಡಾ. ಕರಿಸಿದ್ದಪ್ಪ ಈ ಕುರಿತು ಪ್ರಕಟಣೆಯನ್ನೂ ನೀಡಿದ್ದಾರೆ.

ಕುವೆಂಪು ವಿಶ್ವವಿದ್ಯಾಲಯ, ತುಮಕೂರು, ದಾವಣಗೆರೆ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಎಂಬಿಎ, ಎಂಕಾಂ, ಮತ್ತು ಎಂಎ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತುಮಕೂರು ವಿವಿಯ ಪ್ರೊ. ವೈ.ಎಸ್‌. ಸಿದ್ದೇಗೌಡ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ದಾವಣಗೆರೆ ವಿವಿಯಯಲ್ಲಿ ಜನವರಿ 8 ಮತ್ತು 9ರಂದು ನಡೆಯಬೇಕಾಗಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಕುಲಪತಿ ಎಸ್‌.ವಿ. ಹಾಲ್ಸೆ ಆದೇಶ ಹೊರಡಿಸಿದ್ದಾರೆ.

Comments are closed.