ಕರ್ನಾಟಕ

ಭಾರತ್‌ ಬಂದ್‌, ಯಾವ್ಯಾವ ಜಿಲ್ಲೆಗಳಲ್ಲಿ ರಜೆ ಇದೆ, ಇಲ್ಲ ಎಂಬ ವಿವರ!

Pinterest LinkedIn Tumblr


ಬೆಂಗಳೂರು: ಮೋಟಾರು ವಾಹನ ತಿದ್ದುಪಡಿ ಮಸೂದೆ 2017 ಮತ್ತು ಕೇಂದ್ರ ಸರಕಾರದ ನೀತಿಗಳನ್ನು ವಿರೋಧಿಸಿ ಎರಡು ದಿನಗಳ ಬಂದ್‌ ಕರೆ ನೀಡಲಾಗಿದೆ.

ಜ. 8 ಮಂಗಳವಾರ ಮತ್ತು ಜ. 9 ಬುಧವಾರ, ಎರಡು ದಿನ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ಎರಡು ದಿನ ಭಾರತ್ ಬಂದ್‌ಗೆ ಕರೆ ನೀಡಿದ್ದು, ರಾಜ್ಯದಲ್ಲೂ ಹಲವು ಸೇವೆಗಳ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಅಲ್ಲದೇ ಶಾಲಾ ಕಾಲೇಜುಗಳಿಗೆ ಈಗಾಗಲೇ ಕೆಲವು ಜಿಲ್ಲೆಗಳು ರಜೆ ಘೋಷಿಸಿವೆ.

ಯಾವ್ಯಾವ ಜಿಲ್ಲೆಗಳಲ್ಲಿ ರಜೆ ಇದೆ, ಇಲ್ಲ ಎಂಬ ವಿವರ ಇಲ್ಲಿದೆ…

ಬೆಂಗಳೂರು ನಗರ ಜಿಲ್ಲೆಯಲ್ಲಿ ಜನವರಿ 8ರಂದು ರಜೆ ಘೋಷಿಸಲಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ಬಿ.ಎಂ. ವಿಜಯ ಶಂಕರ್‌ ಈ ಸಂಬಂಧ ಆದೇಶ ಹೊರಡಿಸಿದ್ದಾರೆ.

ಧಾರವಾಡದಲ್ಲಿ ಜ.8ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜ.9ರಂದು ರಜೆ ನೀಡಬೇಕೇ ಎನ್ನುವುದನ್ನು ನಂತರ ನಿರ್ಧರಿಸಲಾಗುವುದು ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

ಮೈಸೂರಿನಲ್ಲಿಯೂ ಜನವರಿ 8ರಂದು ರಜೆ ಘೋಷಿಸಲಾಗಿದೆ.

ಮಂಡ್ಯ ಜಿಲ್ಲೆಯಲ್ಲಿಯೂ ಮಂಗಳವಾರ ರಜೆ ಘೋಷಿಸಲಾಗಿದೆ.

ರಾಮನಗರದಲ್ಲಿಯೂ ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ತುಮಕೂರು ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಜನವರಿ 8ರಂದು ಮಾತ್ರ ರಜೆ ನೀಡಲಾಗಿದೆ.

ಕೊಪ್ಪಳ ಜಿಲ್ಲೆಯಲ್ಲಿಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಯೂ ರಜೆ ನೀಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಬಂದ್‌ಗೆ ಬೆಂಬಲ ದೊರೆತಿದೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ

ಚಾಮರಾಜನಗರದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ದಾವಣಗೆರೆ ಜಿಲ್ಲೆಯಲ್ಲಿ 8ರಂದು ಮಾತ್ರ ರಜೆ ನೀಡಲಾಗಿದೆ.

ಬೀದರ್‌ ಜಿಲ್ಲೆಯಲ್ಲಿಯೂ ರಜೆ ಘೋಷಿಸಲಾಗಿದೆ. ಬಾಗಲಕೋಟದಲ್ಲಿಯೂ ರಜೆ ನೀಡಲಾಗಿದೆ.

ಕೊಡಗು ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಶ್ರೀ ವಿದ್ಯಾ ಘೋಷಣೆ ಮಾಡಿದ್ದಾರೆ.

ವಿಜಯಪುರದಲ್ಲಿಯೂ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಎಸ್‌.ಬಿ. ಶೆಟ್ಟಣ್ಣವರ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಶಾಲಾ-ಕಾಲೇಜುಗಳಿಗೆ ರಜೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್‌ ಸೆಂಥಿಲ್‌ ತಿಳಿಸಿದ್ದಾರೆ.

ಉಡುಪಿ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಶಾಲಾ-ಕಾಲೇಜು ರಜೆ ಘೋಷಿಸಲಾಗಿಲ್ಲ.

Comments are closed.