ಕರ್ನಾಟಕ

ಆಪರೇಷನ್ ಕಮಲ, ಬಿಜೆಪಿಗೆ ಮತ್ತೆ ಮುಖಭಂಗ: ಸಿದ್ದರಾಮಯ್ಯ

Pinterest LinkedIn Tumblr


ಹಾವೇರಿ: ಆಪರೇಷನ್ ಕಮಲದ ಮೂಲಕ ಬಿಜೆಪಿ ಮತ್ತೆ ವಾಮಮಾರ್ಗದಲ್ಲಿ ಅಧಿಕಾರ ಹಿಡಿಯುವ ಪ್ರಯತ್ನ ನಡೆಸುತ್ತಿದೆ. ಆದರೆ ಬಿಜೆಪಿ ಯಾವುದೇ ಕಾರ್ಯಾಚರಣೆ ಫಲ ನೀಡುವುದಿಲ್ಲ, ಈ ಬಾರಿಯೂ ಬಿಎಸ್ ವೈ ಮುಖಭಂಗ ಅನುಭವಿಸಲಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಹಾವೇರಿಯಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಶರಣ ಸಂಸ್ಕೃತಿ ಉತ್ಸವದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಮೈತ್ರಿ ಸರ್ಕಾರ ಬಿಳುತ್ತೇ ಎಂದು ಬಿಜೆಪಿ ನಾಯಕರು ಹಗಲುಕನಸು ಕಾಣುತ್ತಿದ್ದಾರೆ. ಮೊದಲಿನಂತೆ ಪ್ರಯತ್ನ ಮಾಡಿ ಮತ್ತೇ ಮುಖಭಂಗ ಮಾಡಿಕೊಳ್ಳಲಿದ್ದಾರೆ ಎಂದು ಹೇಳಿದರು.

ಅಂತೆಯೇ ನಮ್ಮ ಸಮಿಶ್ರ ಸರ್ಕಾರ ಸುಭದ್ರವಾಗಿದೆ. ಯಾವ ಶಾಸಕರು ಬಿಜೆಪಿಗೆ ಹೋಗಲ್ಲ. ಈ ಹಿಂದೆ ಯಡಿಯೂರಪ್ಪ ಬಹುಮತವಿಲ್ಲದೇ ಸರ್ಕಾರ ರಚಿಸಿ ಮುಖಭಂಗ ಮಾಡಿಸಿಕೊಂಡಿದ್ದಾರೆ. ಮತ್ತೆ ಅಂತಹುದೇ ಪರಿಸ್ಥಿತಿ ಮುಖಭಂಗ ಅವರಿಗೆ ಎದುರಾಗಲಿದೆ ಎಂದು ಹೇಳಿದರು.

ಇದೇ ವೇಳೆ ಸಿಎಂ ಕುಮಾರಸ್ವಾಮಿ ಅವರಿಗೆ ಕ್ಲರ್ಕ್ ಎಂದು ಟೀಕಿಸಿದ್ದ ಪ್ರಧಾನಿ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ಎಲ್ಲಾ ಸ್ಥಾನಗಳಿಗೂ ಅದರದೇ ಆದಂತಹ ಗೌರವವಿರುತ್ತದೆ. ಆದರೆ ದೇಶದ ಪ್ರಧಾನಿ ಮೋದಿ ಅವರು ಈ ರೀತಿ ಹೇಳಿಕೆ ನೀಡಿದ್ದು ಸರಿಯಲ್ಲ. ಒಂದು ರಾಜ್ಯದ ಮುಖ್ಯಮಂತ್ರಿಗೆ ಪ್ರಧಾನಿಯಾಗಿ ಈ ರೀತಿ ಹೇಳಿಕೆ ನೀಡಿದ್ದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

Comments are closed.