ಕರ್ನಾಟಕ

ಶ್ರೀಗಳ ಆರೋಗ್ಯ ಯಥಾಸ್ಥಿತಿ; ದರ್ಶನಕ್ಕೆ ಅವಕಾಶ ಇಲ್ಲ

Pinterest LinkedIn Tumblr

ತುಮಕೂರು: ಸಿದ್ಧಗಂಗಾ ಶ್ರೀಗಳ ಆರೋಗ್ಯ ಸ್ಥಿರವಾಗಿದೆ. ನೆನ್ನೆ ರಾತ್ರಿ ಶ್ರೀಗಳ ರಕ್ತದೊತ್ತಡ ಹೆಚ್ಚಾಗಿತ್ತು, ಅದಕ್ಕೆ ಚಿಕಿತ್ಸೆ ನೀಡಲಾಗಿದೆ ಶ್ವಾಸಕೋಶದಲ್ಲಿ ಸೋಂಕಿನ ಅಂಶ ಕಡಿಮೆಯಾಗಿದೆ ಎಂದು ಡಾ.ಪರಮೆಶ್ ತಿಳಿಸಿದ್ದಾರೆ.

ಶ್ರೀಗಳ ಆರೋಗ್ಯದ ಕುರಿತು ಜ.17 ರಂದು ಬೆಳಿಗ್ಗೆ ಮಾಹಿತಿ ನೀಡಿರುವ ಸಿದ್ದಗಂಗಾ ಆಸ್ಪತ್ರೆಯ ವೈದ್ಯ ಡಾ.ಪರಮೇಶ್, “ಚಿಕಿತ್ಸೆ ಮುಂದುವರೆದಿದೆ. ಶ್ರೀಗಳ ಆರೋಗ್ಯ ಸ್ಥಿರವಾಗಿದೆ. ಸೋಂಕು ಕಡಿಮೆಯಾಗುತ್ತಿದೆ. ಆದರೆ ಉಲ್ಬಣಗೊಳ್ಳುವ ಸಾಧ್ಯತೆ ಇರುವುದರಿಂದ ಯಾರಿಗೂ ದರ್ಶನಕ್ಕೆ ಅವಕಾಶ ನೀಡಲಾಗುತ್ತಿಲ್ಲ ಎಂದು ಹೇಳಿದ್ದಾರೆ.

ಶ್ರೀಗಳ ಪಕ್ಕದಲ್ಲಿ ಕುಳಿತು ಕಿರಿಯ ಶ್ರೀಗಳು ಪೂಜೆ ಮಾಡಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

Comments are closed.