ಕರ್ನಾಟಕ

ಸಿದ್ದಗಂಗಾ ಶ್ರೀಗಳು ಬೇಗ ಗುಣಮುಖರಾಗಲಿ: ಕನ್ನಡದಲ್ಲೇ ಟ್ವೀಟ್ ಮಾಡಿದ ಮೋದಿ

Pinterest LinkedIn Tumblr


ನವದೆಹಲಿ: ಸಿದ್ದಗಂಗಾ ಶ್ರೀಗಳು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ.

ಪರಮಪೂಜ್ಯ ಡಾಕ್ಟರ್ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳವರದು ಅಮೋಘ ವ್ಯಕ್ತಿತ್ವ . ಅವರ ಮಹೋನ್ನತ ಸೇವೆ ಕೋಟ್ಯಾಂತರ ಜನರ ಜೀವನದ ಮೇಲೆ ಸಕಾರಾತ್ಮಕ ಪ್ರಭಾವ ಬೀರಿದೆ. ಶ್ರೀಗಳು ಬೇಗ ಗುಣ ಮುಖರಾಗಲಿ ಎಂದು ಹಾಗೂ ದೇವರು ಅವರಿಗೆ ಉತ್ತಮ ಆರೋಗ್ಯ ಕರುಣಿಸಲೆಂದು ಇಡೀ ರಾಷ್ಟ್ರ ಪ್ರಾರ್ಥಿಸುತ್ತಿದೆ ಎಂದು ಪ್ರಧಾನಿ ಮೋದಿ ತಮ್ಮ ಟ್ವಿಟ್ಟರ್ ನಲ್ಲಿ ಬರೆದಿದ್ದಾರೆ.

Comments are closed.