ಕರ್ನಾಟಕ

ಭ್ರಷ್ಟಾಚಾರ ವಿರುದ್ಧ ಮಾತನಾಡುವ ಮೋದಿ ಶಾಸಕರ ಖರೀದಿಗೆ ಹಣ ಎಲ್ಲಿಂದ ತರುತ್ತಾರೆ ? ಕುಮಾರಸ್ವಾಮಿ ಪ್ರಶ್ನೆ

Pinterest LinkedIn Tumblr

ಕೊಲ್ಕೋತಾ: ಭ್ರಷ್ಟಾಚಾರ ವಿರುದ್ಧ ಹೋರಾಟ ನಡೆಸುತ್ತೇನೆ ಎಂದು ಒಂದೆಡೆ ಪ್ರಧಾನಿ ಮೋದಿ ಹೇಳುತ್ತಾರೆ, ಆದರೆ ಮತ್ತೊಂದೆಡೆ ಅವರ ಪಕ್ಷದ ಮುಖಂಡರು ರಾಜ್ಯ ಕಾಂಗ್ರೆಸ್ ಶಾಸಕರನ್ನು ಖರೀದಿಸಲು ಮುಂದಾಗಿದ್ದಾರೆ, ಇದಕ್ಕೆ ಹಣ ಎಲ್ಲಿಂದ ತರುತ್ತಾರೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಕಳೆದ ಒಂದು ವಾರದಿಂದ ಎಲ್ಲಾ ಬೆಳವಣಿಗೆಗಳನ್ನು ನೀವು ನೋಡುತ್ತಿದ್ದೀರಿ, ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಯತ್ನಿಸುತ್ತಿದೆ, ನಾನು ಪ್ರಧಾನ ಮಂತ್ರಿಗಳಿಗೆ ಒಂದು ಪ್ರಶ್ನೆ ಕೇಳಲು ಬಯಸುತ್ತೇನೆ ಇತ್ತೀಚೆಗೆ ಪ್ರಧಾನ ಮಂತ್ರಿಗಳು ದೇಶವನ್ನು ಸ್ವಚ್ಛಗೊಳಿಸಲು ಹಾಗೂ ಭ್ರಷ್ಚಾಚಾರ ನಿರ್ಮೂಲನೆ ಮಾಡಲು ದೇಶದ ಜನತೆ ಸಹಕರಿಸಬೇಕು ಎಂದು ಕೇಳಿದ್ದರು.

ಆದರೆ ಕರ್ನಾಟಕದಲ್ಲಿ ಏನಾಗುತ್ತಿದೆ, ಕಾಂಗ್ರೆಸ್ ಶಾಸಕರನ್ನು ಖರೀದಿಸಲು ಎಲ್ಲಿಂದ ಹಣ ಬಂತು, ಅವರಿಗೆ ಬೆಂಬಲ ನೀಡುತ್ತಿರುವವರು ಯಾರು? ಅವರಿಗೆ ಹಣ ಎಲ್ಲಿಂಜದ ಬಂತು? ಎಂದು ಕುಮಾರ ಸ್ವಾಮಿ ಪ್ರಶ್ನಿಸಿದ್ದಾರೆ.

ಇನ್ನೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಶಾಸಕರು ಗೈರಿನ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಏನು ತೊಂದರೆಯಿಲ್ಲ, ಅವರು ನಮ್ಮ ಜೊತೆಗೆ ಇರುತ್ತಾರೆ ಎಂದು ಹೇಳಿದ್ದಾರೆ.

Comments are closed.