ಕರ್ನಾಟಕ

ಅನಾರೋಗ್ಯ ಮಕ್ಕಳಿಬ್ಬರನ್ನು ಮುಳುಗಿಸಿ ಕೊಂದು ತಾಯಿ ಆತ್ಮಹತ್ಯೆ

Pinterest LinkedIn Tumblr


ಮಂಡ್ಯ: ಕಾಡುತ್ತಿದ್ದ ಅನಾರೋಗ್ಯದಿಂದ ಬೇಸತ್ತು 25 ವರ್ಷ ಪ್ರಾಯದ ಮಹಿಳೆಯೊಬ್ಬಳು ತನ್ನ ಪುಟ್ಟ ಮಕ್ಕಳಿಬ್ಬರನ್ನು ಹತ್ಯೆಗೈದು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ನಾಗಮಂಗಲದ ಶಿವನ ಹಳ್ಳಿ ಗ್ರಾಮದಲ್ಲಿ ನಡೆದಿದೆ.

ಪುಟ್ಟಮ್ಮ ಎಂಬಾಕೆ ಆತ್ಮಹತ್ಯೆ ಮಾಡಿಕೊಂಡಿದ್ದು, ಮಕ್ಕಳಾದ ಸಂತೋಷ್‌(2)ಸಾತ್ವಿಕ್‌ (7)ಎನ್ನುವ ಮಕ್ಕಳನ್ನು ನೀರಿನ ಡ್ರಮ್‌ನಲ್ಲಿ ಮುಳುಗಿಸಿ ಭೀಕರವಾಗಿ ಹತ್ಯೆಗೈದಿದ್ದಾಳೆ.

ನಾಗಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಗ್ರಾಮಸ್ಥರು ದೃಶ್ಯ ಕಂಡು ಕಣ್ಣೀರಿಟ್ಟಿದ್ದಾರೆ.

Comments are closed.