ಕರ್ನಾಟಕ

ಇಂದು ಸಿದ್ದಗಂಗಾ ಶ್ರೀಗಳ ಅಂತಿಮ ದರ್ಶನಕ್ಕೆ ಪ್ರಧಾನಿ ಮೋದಿ, ಅಮಿತ್​ ಷಾ ಆಗಮನ

Pinterest LinkedIn Tumblr


ಬೆಂಗಳೂರು: ತ್ರಿವಿಧ ದಾಸೋಹಿ, ಶತಾಯುಷಿ, ಪರಮ ಗುರು ಶ್ರೀ ಶಿವಕುಮಾರ ಸ್ವಾಮಿಜಿಯವರ ಅಂತಿಮ ದರ್ಶನ ಪಡೆಯಲು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಮಂಗಳವಾರ ಸಿದ್ಧಗಂಗಾ ಮಠಕ್ಕೆ ಆಗಮಿಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ರಾಜನಾಥ್​ ಸಿಂಗ್​, ರಕ್ಷಣಾ ಮಂತ್ರಿ ನಿರ್ಮಲಾ ಸೀತಾರಾಮನ್​, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಷಾ ಸೇರಿದಂತೆ ಅನೇಕ ಗಣ್ಯರು ಬೆಳಗ್ಗೆ 10.30ಕ್ಕೆ ವಿಶೇಷ ವಿಮಾನದಲ್ಲಿ ಎಚ್​ಎಎಲ್​ ವಿಮಾನ ನಿಲ್ದಾಣಕ್ಕೆ ಬಂದು, ಅಲ್ಲಿಂದ ಸೇನಾ ಹೆಲಿಕಾಪ್ಟರ್​ನಲ್ಲಿ ತುಮಕೂರಿಗೆ ಆಗಮಿಸಿ, ಶ್ರೀಗಳ ಅಂತಿಮ ದರ್ಶನ ಪಡೆಯಲಿದ್ದಾರೆ.

ಕಳೆದ ಹಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀ ಶಿವಕುಮಾರ ಸ್ವಾಮಿಜಿ ಇಂದು ಬೆಳಿಗ್ಗೆ 11.44ಕ್ಕೆ ನಿಧನರಾದರು. ಶೀಗಳ ಅಗಲಿಕೆಯಿಂದ ಸಿದ್ದಗಂಗಾ ಮಠದಲ್ಲಿ ನೀರವ ಮೌನ ಆವರಿಸಿದ್ದು, ವಿದ್ಯಾರ್ಥಿಗಳ ಆಕ್ರಂದನ ಮುಗುಳು ಮುಟ್ಟಿದೆ. ರಾಜ್ಯದ ವಿವಿಧ ಭಾಗಗಳಿಂದ ಅಪಾರ ಸಂಖ್ಯೆಯ ಗಣ್ಯರು ಮತ್ತು ಭಕ್ತರು ಶ್ರೀಗಳ ಅಂತಿಮ ದರ್ಶನ ಪಡೆಯಲು ಮಠಕ್ಕೆ ಆಗಮಿಸುತ್ತಿದ್ದು, ತುಮಕೂರಿನಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Comments are closed.