ಕರ್ನಾಟಕ

ಫೆಬ್ರವರಿ 6 ರಿಂದ 15 ರವರೆಗೆ ಎಂಟು ದಿನಗಳ ಕಾಲ ನಡೆಯಲಿರುವ ರಾಜ್ಯ ಬಜೆಟ್ ಅಧಿವೇಶನ

Pinterest LinkedIn Tumblr

ವಿಧಾನಮಂಡಲದ ಉಭಯ ಸದನಗಳ ಜಂಟಿ ಅಧಿವೇಶನ ಫೆಬ್ರವರಿ 6 ರಿಂದ ಆರಂಭವಾಗಲಿದ್ದು, ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಫೆಬ್ರವರಿ 8 ರಂದು ಬಜೆಟ್ ಮಂಡನೆ ಮಾಡಲಿದ್ದಾರೆ.

ಫೆಬ್ರವರಿ 6 ರಿಂದ 15 ರವರೆಗೆ ಎಂಟು ದಿನಗಳ ಕಾಲ ಬಜೆಟ್ ಅಧಿವೇಶನ ನಡೆಯಲಿದ್ದು, ಮೊದಲ ದಿನದಂದು ಬೆಳಗ್ಗೆ 11 ಗಂಟೆಗೆ ರಾಜ್ಯಪಾಲ ವಜುಭಾಯಿ ವಾಲಾ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಫೆಬ್ರವರಿ 7 ರಂದು ಕಲಾಪ ನಡೆಯಲಿದ್ದು ಫೆಬ್ರವರಿ 8 ರಂದು ಕುಮಾರಸ್ವಾಮಿ ಅವರು 2019-20 ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕುಮಾರಸ್ವಾಮಿಯವರು ತಮ್ಮ ಬಜೆಟ್ ನಲ್ಲಿ ಶ್ರೀಸಾಮಾನ್ಯರಿಗೆ ಭರ್ಜರಿ ಕೊಡುಗೆ ನೀಡುವ ಸಾಧ್ಯತೆ ಇದೆ.

Comments are closed.