
ಬೆಂಗಳೂರು: ಬಿಡದಿ ಬಳಿ ಇರುವ ಈಗಲ್ಟನ್ ರೆಸಾರ್ಟ್ನಲ್ಲಿ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಮೇಲೆ ಕಂಪ್ಲಿ ಶಾಸಕ ಜೆ ಎನ್ ಗಣೇಶ್ ಹಲ್ಲೆ ಮಾಡಿ ವಾರ ಕಳೆದಿದ್ದು, ಆನಂದ್ ಇನ್ನೂ ಚೇತರಿಸಿಕೊಂಡಿಲ್ಲ.
ಬೆಂಗಳೂರಿನ ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆನಂದ್ ಸಿಂಗ್ ಅವರನ್ನು ಇಂದು [ಶನಿವಾರ] ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು.
25 ನಿಮಿಷಗಳ ಕಾಲ ಆನಂದ್ ಸಿಂಗ್ ಅವರೊಡನೆ ಮಾತುಕತೆ ನಡೆಸಿದ ಕುಮಾರಸ್ವಾಮಿ, ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡರು. ಬಳಿಕ ಆಸ್ಪತ್ರೆಯಿಂದ ಹೊರಬಂದ ಕುಮಾರಸ್ವಾಮಿ ಅವರು ಮಾಧ್ಯಮಗಳಿಗೆ ಯಾವುದೇ ರೀತಿ ಪ್ರತಿಕ್ರಿಯೆ ನೀಡದೆ ಹೊರಟರು.
ಈ ಘಟನೆ ಬಗ್ಗೆ ಗಣೇಶ್ ವಿರುದ್ಧ ದೂರು ದಾಖಲಾಗಿದ್ದು, ಅವರನ್ನು ಬಂಧಿಸಲು ನಾಲ್ಕು ತಂಡಗಳನ್ನು ರಚಿಸಲಾಗಿದೆ.
Comments are closed.