ಕರ್ನಾಟಕ

ಕೆಬಲ್ ಚಾನಲ್‌ನ ಪ್ರೀ ಮತ್ತು ಪೇ ಚಾನೆಲ್‍ಗಳ ಬಗ್ಗೆ ಸಂಪೂರ್ಣ ಮಾಹಿತಿ

Pinterest LinkedIn Tumblr

ಫೆಬ್ರವರಿ 1 ರಿಂದ ಹೊಸ ಕೇಬಲ್ ನೀತಿ ಜಾರಿಯಾಗಲಿದ್ದು, ಕೇಬಲ್ ಟಿವಿ ಮತ್ತು ಡಿಟಿಹೆಚ್ ದರದ ಮಾಹಿತಿಗಳನ್ನು ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.

ಹೊಸ ಕೇಬಲ್ ಮತ್ತು ಡಿಟಿಹೆಚ್ ನಿಯಮಗಳ ಪ್ರಕಾರ, ಕನ್ನಡದ ಪೇಯ್ಡ್ ಚಾನೆಲ್ ಗಳ ದರ ಇಂತಿದೆ. ನ್ಯೂಸ್ 18 ಕನ್ನಡ 25 ಪೈಸೆ, ಸ್ಟಾರ್ ಸ್ಪೋರ್ಟ್ಸ್ ಕನ್ನಡ 19 ರೂ., ಚಿಂಟು ಟಿವಿ ಕನ್ನಡ 6 ರೂ., ಉದಯ ಕಾಮಿಡಿ 6 ರೂ., ಉದಯ ಮೂವೀಸ್ 16 ರೂ., ಉದಯ ಮ್ಯೂಸಿಕ್ 6 ರೂ., ಉದಯ ಟಿವಿ 17 ರೂ., ಕಲರ್ಸ್ ಕನ್ನಡ 19 ರೂ., ಸ್ಟಾರ್ ಸುವರ್ಣ 19 ರೂ., ಜೀ ಕನ್ನಡ 19 ರೂ., ಸುವರ್ಣ ಪ್ಲಸ್ ಚಾನಲ್ ಗೆ 5 ರೂ. ದರ ಇದೆ.

ಡಿಸ್ಕವರಿ ಚಾನೆಲ್ ಗೆ 4 ರೂ., ಡಿಸ್ಕವರಿ ಕಿಡ್ಸ್ ಚಾನೆಲ್ ಗೆ 3 ರೂ., ಅನಿಮಲ್ ಪ್ಲಾನೆಟ್ ಗೆ 24 ರೂ. ದರ ನಿಗದಿ ಮಾಡಲಾಗಿದೆ. ಕ್ರೀಡಾ ಚಾನೆಲ್ ಗಳಾದ ಸೋನಿ ಇ.ಎಸ್.ಪಿ.ಎನ್. ಹೆಚ್ ಡಿಗೆ 7 ರೂ., ಸೋನಿ ಇ.ಎಸ್.ಪಿ.ಎನ್. ಗೆ 5 ರೂ., ಸ್ಟಾರ್ ಸ್ಪೋರ್ಟ್ಸ್ ಚಾನೆಲ್ ಗೆ 4 ರೂ. ದರ ನಿಗದಿ ಮಾಡಲಾಗಿದೆ.
ಟ್ರಾಯ್ ನಿಯಮದ ಪ್ರಕಾರ ಜನವರಿ 31 ರೊಳಗೆ ಗ್ರಾಹಕರು ತಮಗೆ ಇಷ್ಟವಾದ ಪೇ ಚಾನೆಲ್ ಗಳನ್ನು ಆಯ್ಕೆ ಮಾಡಿಕೊಳ್ಳಬೇಕು. ಬೇಸಿಕ್ ಪ್ಯಾಕೇಜ್ ನಲ್ಲಿ 130 ರೂ.ಗೆ 100 ಟಿವಿ ಚಾನೆಲ್ ವೀಕ್ಷಿಸಬಹುದು. ಇದಕ್ಕೆ ಜಿ.ಎಸ್.ಟಿ. ಸೇರಿ 153 ರೂ. ಪಾವತಿಸಬೇಕಿದೆ.

ಈ 100 ಚಾನೆಲ್ ಗಳು ಫ್ರೀ ಚಾನೆಲ್ ಗಳಾಗಿದ್ದು, ಇದರಲ್ಲಿ ಪೇಯ್ಡ್ ಚಾನೆಲ್ ಗಳನ್ನು ಬೇಕಿದ್ದರೆ ಸೇರಿಸಿಕೊಳ್ಳಬಹುದು. 100 ಕ್ಕಿಂತ ಹೆಚ್ಚು ಚಾನೆಲ್ ವೀಕ್ಷಿಸಲು 20 ರೂ.ಗೆ 25 ಚಾನೆಲ್ ಗಳ ಸ್ಲ್ಯಾಬ್ ಪಡೆಯಬಹುದು. ಪೇ ಚಾನೆಲ್ ಗಳನ್ನು ಹೆಚ್ಚಿಸಿದರೆ ಬಿಲ್ ಕೂಡ ಏರಿಕೆಯಾಗುತ್ತದೆ. ಆದರೆ ನೋಡದೆ ಇರುವ ಚಾನೆಲ್ ಗಳನ್ನು ಬಿಟ್ಟಲ್ಲಿ ಶುಲ್ಕ ಇಳಿಕೆಯಾಗುತ್ತದೆ. ಉಚಿತ ಚಾನೆಲ್ ಗಳ ಸೇವೆ ಎಂದಿನಂತೆಯೇ ಮುಂದುವರೆಯಲಿದ್ದು, ಪೇಯ್ಡ್ ಚಾನೆಲ್ ಗಳ ಸೇವೆಯಲ್ಲಿ ವ್ಯತ್ಯಯವಾಗಲಿದೆ.

Comments are closed.