ಬೆಂಗಳೂರು: ಪಕ್ಷದ ನಿಯಮಗಳನ್ನು ಗಾಳಿಗೆ ತೂರಿ ಪಕ್ಷ ವಿರೋಧಿ ಚಟುವಟಿಕೆಗಳನ್ನು ನಡೆಸುತ್ತಿರುವ ಬಂಡಾಯ ಶಾಸಕರನ್ನು ಅನರ್ಹಗೊಳಿಸುವಂತೆ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ನಿಯೋಗ ಅಧಿಕೃತ ದೂರು ನೀಡಿದೆ.
ಸೋಮವಾರದಂದು ಸಿದ್ದರಾಮಯ್ಯ ಜೊತೆಗೆ ,ಪರಮೇಶ್ವರ್ ,ದಿನೇಶ್ ಗುಂಡುರಾವ್ ಹಾಗೂ ಕೃಷ್ಣ ಬೈರೇಗೌಡ ಅವರು ವಿಧಾನ ಸೌಧಕ್ಕೆ ತೆರಳಿ ಸ್ಪೀಕರ್ ಗೆ ದೂರು ಸಲ್ಲಿಸಿದ್ದಾರೆ. ದೂರಿನಲ್ಲಿ ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ, ಉಮೇಶ್ ಜಾಧವ್ ಮತ್ತು ಬಿ. ನಾಗೇಂದ್ರರನ್ನು ಅನರ್ಹಗೊಳಿಸಬೇಕೆಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.
ಈ ಹಿಂದೆ ಈ ಶಾಸಕರು ಶಾಸಕಾಂಗ ಸಭೆಗೆ ಹಾಜರಾಗುವಂತೆ ನೀಡಿದ್ದ ವಿಪ್ ಉಲ್ಲಂಘನೆ ಮಾಡಿದ್ದರು ಅಲ್ಲದೆ . ಉಲ್ಲಂಘನೆಗೆ ಸ್ಪಷ್ಟನೆ ನೀಡುವಂತೆ ಕಳುಹಿಸಲಾಗಿದ್ದ ಪತ್ರಕ್ಕೂ ಸಮರ್ಪಕ ಉತ್ತರ ನೀಡಿರಲಿಲ್ಲ ಜೊತೆಗೆ ಬಜೆಟ್ ಅಧಿವೇಶನದಲ್ಲೂ ಗೈರು ಉಳಿಯುವ ಮೂಲಕ ಪಕ್ಷದ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದರು.
ಈ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಸೇರಿ ಪಕ್ಷದ ನಾಯಕರು ಈ ಬಂಡಾಯ ಶಾಸಕರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳುವ ನಿಟ್ಟಿನಲ್ಲಿ ಈಗ ಅವರು ಸ್ಪೀಕರ್ ಗೆ ಶಾಸಕ ಸದಸ್ಯತ್ವವನ್ನು ಅನರ್ಹಗೊಳಿಸಬೇಕೆಂದು ದೂರು ನೀಡಿದ್ದಾರೆ.