ಕರ್ನಾಟಕ

ಮತ್ತೆ ಮೈತ್ರಿ ಸರ್ಕಾರಕ್ಕೆ ಬೆಂಬಲ ನೀಡಿ ಸಿದ್ದರಾಮಯ್ಯ ಮನೆ ಬಾಗಿಲಿಗೆ ಬಂದ ಪಕ್ಷೇತರ ಶಾಸಕ!

Pinterest LinkedIn Tumblr


ಬೆಂಗಳೂರು: ಜೆಡಿಎಸ್‌ ಮತ್ತು ಕಾಂಗ್ರೆಸ್‌ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್‌ ಪಡೆದಿದ್ದ ಮುಳಬಾಗಲು ಕ್ಷೇತ್ರದ ಪಕ್ಷೇತರ ಶಾಸಕ ನಾಗೇಶ್‌ ಮತ್ತೆ ಕಾಂಗ್ರೆಸ್‌ ತೆಕ್ಕೆಗೆ ಮರಳಿದ್ದಾರೆ.

ಮೈತ್ರಿ ಸರ್ಕಾರದ ಕಾರ್ಯವೈಖರಿ ತೃಪ್ತಿ ನೀಡಿಲ್ಲ ಮತ್ತು ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ ಸಿಕ್ಕಿಲ್ಲ ಎಂದು ಅಸಮಾಧಾನಗೊಂಡು ಕಾಂಗ್ರೆಸ್‌, ಜೆಡಿಎಸ್‌ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್‌ ಪಡೆದಿದ್ದರು.

ಇದೀಗ ಮತ್ತೆ ಕಾಂಗ್ರೆಸ್‌ನ​ ಸಹ ಸದಸ್ಯತ್ವವನ್ನು ಶಾಸಕ ನಾಗೇಶ್ ಸ್ವೀಕರಿಸಿದ್ದು, ಈ ಸಂಬಂಧ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಪತ್ರವನ್ನು ನೀಡಿದ್ದಾರೆ.

ಕಳೆದೊಂದು ತಿಂಗಳಿನಿಂದ ನಡೆದ ರಾಜ್ಯ ರಾಜಕಾರಣದಲ್ಲಿ ಹೈಡ್ರಾಮಾದಲ್ಲಿ ರಾಣೇಬೆನ್ನೂರು ಪಕ್ಷೇತರ ಶಾಸಕ ಆರ್. ಶಂಕರ್ ಹಾಗೂ ಮುಳಬಾಗಲು ಕ್ಷೇತ್ರದ ಪಕ್ಷೇತರ ಶಾಸಕ ನಾಗೇಶ್‌ ಇವರಿಬ್ಬರು ದೋಸ್ತಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದುಕೊಂಡಿದ್ದರು.

ಬಳಿಕ ಬಿಜೆಪಿ ನಾಯಕರ ಜೊತೆ ಸೇರಿಕೊಂಡು ಮೈತ್ರಿ ಸರ್ಕಾರಕ್ಕೆ ಸೆಡ್ಡು ಹೊಡೆದಿದ್ದರು. ಆದ್ರೆ ಈಗ ಬದಲಾದ ರಾಜಕೀಯ ಬೆಳವಣಿಗೆಯಿಂದ ಪುನಃ ಬೆಂಬಲ ಪತ್ರ ಹಿಡಿದು ಸಿದ್ದರಾಮಯ್ಯ ಮನೆ ಬಾಗಿಲಿಗೆ ಬಂದಿದ್ದಾರೆ.

Comments are closed.