ಕರ್ನಾಟಕ

ಪ್ರೇಮಿಗಳ ದಿನವೇ ಹಸೆಮಣೆ ಏರಿದ ದಾವಣಗೆರೆ ಜಿಲ್ಲೆಯ ಇಬ್ಬರು ಐಎಎಸ್ ಅಧಿಕಾರಿಗಳು

Pinterest LinkedIn Tumblr

ದಾವಣಗೆರೆ: ಪ್ರೇಮಿಗಳ ದಿನವೇ ದಾವಣಗೆರೆ ಜಿಲ್ಲೆಯ ಇಬ್ಬರು ಐಎಎಸ್ ಅಧಿಕಾರಿಗಳು ಹಸೆಮಣೆ ಏರಿದ್ದಾರೆ.

ದಾವಣಗೆರೆ ಜಿಲ್ಲಾ ಪಂಚಾಯತ್ ಸಿಇಒ ಎಸ್ ಅಶ್ವತಿ ಹಾಗೂ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಪ್ರೇಮ ಇಂದು ವಿವಾಹ ಬಂಧನಕ್ಕೊಳಗಾಗಿದ್ದಾರೆ.

ಕೇರಳ ವಧು, ಆಂಧ್ರ ವರನಿಗೆ ಕರ್ನಾಟಕದಲ್ಲಿ ಪ್ರೀತಿ ಮೊಳಕೆಯೊಡೆದು ಪ್ರೇಮಿಗಳ ದಿನದಂದೇ ಸಪ್ತಪದಿ ತುಳಿದಿದ್ದಾರೆ. ಕೇವಲ ಅರ್ಧ ಗಂಟೆಯಲ್ಲಿ ಸರಳ ವಿವಾಹ ಮುಗಿದಿದ್ದು ಹೊಸ ಜೀವನಕ್ಕೆ ಅಧಿಕಾರಿಗಳು ಕಾಲಿಟ್ಟಿದ್ದಾರೆ.

ಡಾ. ಬಗಾದಿ ಗೌತಮ್ ರಾಯಚೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದ ಸಮಯದಲ್ಲಿ ಎಸ್. ಅಶ್ವತಿ ಜೊತೆಗೆ ಮದುವೆಯ ಮಾತುಕತೆ ನಡೆದಿತ್ತು. ರಾಜ್ಯದ ಪ್ರಮುಖ ಐಎಎಸ್ ಅಧಿಕಾರಿ ಮುಂದಾಳತ್ವದಲ್ಲಿ ಎರಡು ಕುಟುಂಬದ ಜೊತೆ ಮದುವೆ ಮಾತುಕತೆ ನಡೆದಿತ್ತು.

ಗೌತಮ್ 2009ನೇ ಬ್ಯಾಚ್‍ನ ಹಿರಿಯ ಐಎಎಸ್ ಅಧಿಕಾರಿ ಆದರೆ, ಅಶ್ವತಿ 2013ನೇ ಬ್ಯಾಚ್‍ನ ಐಎಎಸ್ ಅಧಿಕಾರಿ ಆಗಿದ್ದಾರೆ. ನಾಲ್ಕು ವರ್ಷದ ಹಿಂದೆಯೇ ಇವರಿಬ್ಬರ ನಡುವೆ ಪ್ರೀತಿ ಬೆಳೆದಿತ್ತು. ಅಶ್ವತಿ ಕ್ಯಾಲಿಕಟ್‍ನ ಹಿರಿಯ ವಕೀಲರಾದ ಸೆಲ್ವಿರಾಜ್ ಹಾಗೂ ವಾಣಿಜ್ಯ ತೆರಿಗೆ ಇಲಾಖೆಯ ನಿವೃತ್ತ ಜಿಲ್ಲಾಧಿಕಾರಿ ಪುಷ್ಪಾ ಅವರ ಪುತ್ರಿಯಾಗಿದ್ದಾರೆ.

Comments are closed.