ಕರ್ನಾಟಕ

ಯೋಧರಿಗೆ ನಮನ ಸಲ್ಲಿಸುವಾಗಲೆ ಹಾವೇರಿಯಲ್ಲಿ ಪಾಕ್ ಪರ ಘೋಷಣೆ!

Pinterest LinkedIn Tumblr


ಹಾವೇರಿ: ರಾಯಚೂರಿನ ಮಸ್ಕಿ ತಾಲೂಕಿನ ತಲೆಖಾನ್ ಗ್ರಾಮದಲ್ಲಿ ಫೆ. 15ರ ತಡರಾತ್ರಿ 15ಕ್ಕೂ ಹೆಚ್ಚು ಯುವಕರು ಹಸಿರು ಬಣ್ಣ ಎರಚಿಕೊಂಡು ಪಟಾಕಿ ಸಿಡಿಸಿ ಸಂಭ್ರಮಿಸಿದ್ದು ಸುದ್ದಿಯಾಗಿತ್ತು.

ಇದೀಗ ಹಾವೇರಿಯ ದೇವಗಿರಿಯಲ್ಲಿ ಪಾಕ್ ಪರ ಘೋಷಣೆ ಕೇಳಿ ಬಂದಿದೆ. ಹಾವೇರಿ ಜಿಲ್ಲಾಧಿಕಾರಿ ಕಚೇರಿಯ ಸಮೀಪದಲ್ಲೇ ಇಂಥ ಪ್ರಕರಣ ನಡೆದಿದ್ದು ಹುತಾತ್ಮ ಯೋಧರಿಗೆ ಶೃದ್ಧಾಂಜಲಿ ಸಲ್ಲಿಸುವ ವೇಳೆ ಪಾಕ್ ಪರ ಘೋಷಣೆ ಕೇಳಿಬಂದಿದೆ.

ಒಂದು ಕೋಮಿನ ಯುವಕ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾನೆ. ಘೋಷಣೆ ಕೂಗಿದ ಯುವಕನನ್ನು ಗ್ರಾಮಸ್ಥರು ಥಳಿಸಿ ಪೊಲೀಸರ ವಶಕ್ಕೆ ನೀಡಿದ್ದಾರೆ.ಗ್ರಾಮದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು ಹಾವೇರಿ ಪೊಲೀಸರು ಗ್ರಾಮಕ್ಕೆ ಭೇಟಿ, ಪರಿಶೀಲನೆ ನಡೆಸಿ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದಾರೆ.

Comments are closed.