ಕರ್ನಾಟಕ

ಭೀಮಾತೀರದಲ್ಲಿ ಗುಂಡಿನ ದಾಳಿಯಲ್ಲಿ ಓರ್ವ ಸಾವು

Pinterest LinkedIn Tumblr


ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಹಲಸಂಗಿ ಗ್ರಾಮದಲ್ಲಿ ಭಾನುವಾರ ಗುಂಡಿನ ದಾಳಿ ನಡೆದಿದ್ದು, ದಾಳಿಯಲ್ಲಿ ಓರ್ವ ಸಾವನ್ನಪ್ಪಿದ್ದಾನೆ.

ಅರ್ಜುನ್​ ಡೊಳ್ಳಿ (52) ಮೃತ. ಇಂಡಿ ತಾಲೂಕಿನ ಹಲಸಂಗಿ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ಈ ದಾಳಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮೊದಲಿಗೆ ಈತನ ಮೇಲೆ ಗುಂಡಿನ ದಾಳಿ ನಡೆಸಿರುವ ದುಷ್ಕರ್ಮಿಗಳು ಬಳಿಕ ಮಾರಕಾಸ್ತ್ರಗಳಿಂದ ಮನಬಂದಂತೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ.

ಈ ಬಗ್ಗೆ ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರು ದಾಳಿಕೋರರ ಬಂಧನಕ್ಕೆ ಬಲೆ ಬೀಸಿದ್ದಾರೆ. ಈ ತರಹದ ಹತ್ಯೆ ಇದೇ ಮೊದಲಲ್ಲ. ಈ ಹಿಂದೆ ಹಲವು ಶೂಟೌಟ್ ಗಳಾಗಿರುವ ಪ್ರಕರಣಗಳು ಇವೆ.

Comments are closed.