ಕರ್ನಾಟಕ

ಹಾಸನದಲ್ಲಿ ಶೌಚಾಲಯಕ್ಕೆ ಡಿಕ್ಕಿ ಹೊಡೆದ ಕಾರು: ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವು

Pinterest LinkedIn Tumblr

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಶೌಚಾಲಯಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಉದಯಪುರ ಬಳಿ ನಡೆದಿದೆ.

ಬೆಳಗಿನ ಜಾವ 8 ಗಂಟೆ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಮೃತರು ಬೆಂಗಳೂರಿನ ಚಿಕ್ಕಬಾಣಾವರ ನಿವಾಸಿಗಳು ಎಂದು ತಿಳಿದುಬಂದಿದೆ. ಮಗು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಇಹಲೋಕ ತ್ಯಜಿಸಿದ್ದಾರೆ. ಮೃತರನ್ನು ವಿವೇಕ್ ನಾಯಕ್(40), ರೇಷ್ಮಾ ನಾಯಕ್(30) ಮಗಳು ಆವಂತಿನಾಯಕ್(8)ಮತ್ತು ಮಗ ಸೇವಂತ್(6) ಎಂದು ಗುರುತಿಸಲಾಗಿದೆ.

ಮೃತರು ಮೂಲತಃ ಕುಂದಾಪುರದವರು. ಆದರೆ ಬೆಂಗಳೂರಿನ ಚಿಕ್ಕಬಾಣಾವರದಲ್ಲಿ ಅಪಾರ್ಟ್​​ಮೆಂಟ್​ನಲ್ಲಿ ವಾಸವಿದ್ದರು. ಮೃತ ವಿವೇಕ್​ ನಾಯಕ್​​ ಸ್ಪೈಕಾರ್​ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಇಂದು ಬೆಂಗಳೂರಿನಿಂದ ತಮ್ಮ ಹುಟ್ಟೂರು ಕುಂದಾಪುರ ಗ್ರಾಮಕ್ಕೆ ಹೊರಟಿದ್ದರು. ಬೆಳಗಿನ ಜಾವ 5.30 ಕ್ಕೆ ಬೆಂಗಳೂರಿನಿಂದ ತೆರಳಿದ್ದರು. ಆದರೆ ಮಾರ್ಗಮಧ್ಯೆ ಕಾರು ನಿಯಂತ್ರಣ ಕಳೆದುಕೊಂಡು ಶೌಚಾಲಯಕ್ಕೆ ಡಿಕ್ಕಿ ಹೊಡೆದಿದೆ.

ಸ್ಥಳಕ್ಕೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಎ.ಎನ್.ಪ್ರಕಾಶ್​ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಮರಣೋತ್ತರ ಪರೀಕ್ಷಗೆ ಒಳಪಡಿಸಲಾಗಿದೆ.

Comments are closed.