ಕರ್ನಾಟಕ

ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಗೆ: ಸಚಿವ ಡಿ.ಕೆ ಶಿವಕುಮಾರ್ ಹೇಳಿಕೆ

Pinterest LinkedIn Tumblr

ಬೆಂಗಳೂರು: ಮಂಡ್ಯ ಲೋಕಸಭೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಬೆಳವಣಿಗೆ ನಡೆಯುತ್ತಿರುವ ಬೆನ್ನಲ್ಲೇ, ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡುವುದಾಗಿ ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಬಾಂಬ್ ಸಿಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವ ಡಿ.ಕೆ ಶಿವಕುಮಾರ್ ಮಂಡ್ಯ ಲೋಕಸಭೆ ಕ್ಷೇತ್ರ ಸಂಬಂಧಿಸಿದಂತೆ ಬೇರೆಯೇ ನಿರ್ಣಯ ಆಗಿದೆ, ಮಂಡ್ಯದ ಎಲ್ಲಾ ವಿಧಾನಸಭೆ ಕ್ಷೇತ್ರಗಳನ್ನು ಜೆಡಿಎಸ್ ಶಾಸಕರಿದ್ದಾರೆ, ಹೀಗಾಗಿ ಮಂಡ್ಯವನ್ನು ಜೆಡಿಎಸ್ ಗೆ ಬಿಟ್ಟುಕೊಡಲಿದ್ದೇವೆ ಎಂದು ಹೇಳಿದ್ದಾರೆ.

ಇನ್ನೂ ಮಂಡ್ಯ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಟಿಕೆಟ್ ಪಡೆದು ಸ್ಪರ್ಧಿಸಬೇಕೆಂದು ಬಯಸಿದ್ದ ಸುಮಲತಾ ಅಂಬರೀಷ್ ಅವರ ಆಸೆಗೆ ತಣ್ಣಿರೆರಚಿದಂತಾಗಿದೆ.

ಮಂಡ್ಯದ ಕೆಲ ಕಾರ್ಯಕರ್ತರು ಸುಮಲತಾರನ್ನ ಒತ್ತಾಯಿಸಿದ್ದಾರೆ. ನಾವು ಸುಮಲತಾ ಅವರ ಮನವೊಲಿಸುವ ಕೆಲಸ ಮಾಡುತ್ತೇವೆ. ಕಾರ್ಯಕರ್ತರಿಗೂ ತಿಳಿಸಿ ಹೇಳುತ್ತೇವೆ. ಸುಮಲತಾ ಅವರಿಗೂ ಪರಿಸ್ಥಿತಿ ವಿವರಿಸಿದ್ದೇವೆ ಎಂದು ಸ್ಪಷ್ಟವಾಗಿ ಶಿವಕುಮಾರ್ ಹೇಳಿದ್ದಾರೆ.

ಸುಮಲತಾ ರಾಜಕೀಯಕ್ಕೆ ಬರುವುದಾದರೆ ಬರಲಿ. ಬೇರೆ ರೀತಿಯಲ್ಲಿ ಸಾಕಷ್ಟು ಅವಕಾಶಗಳಿದ್ದು, ನಾವೆಲ್ಲ ಅವರಿಗೆ ಸಹಕಾರ ಕೊಡುತ್ತೇವೆ ಎಂದು ಹೇಳಿದರು.

Comments are closed.